ಇಂದು ಗಮಕ ಗಾಯನ
ಕರ್ನಾಟಕ ಗಮಕ ಕಲಾ ಪರಿಷತ್ ಜಿಲ್ಲಾ ಶಾಖೆಯ ವತಿಯಿಂದ ಜಿಲ್ಲಾ ಮಟ್ಟದ ಗಮಕ ಗಾಯನ ವ್ಯಾಖ್ಯಾನ ಕಾರ್ಯಕ್ರಮ ಜೂ.21ರಂದು ಮಧ್ಯಾಹ್ನ 3 ಗಂಟೆಗೆ ನಗರದ ಶ್ರೀವಾಸವಿ ಪ್ರೌಢಶಾಲೆಯಲ್ಲಿ ನಡೆಯಲಿದೆ.
ಎಪಿಎಂಸಿ: ಕೊಬ್ಬರಿ ಖರೀದಿ ಕೇಂದ್ರ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಲ್ಲಿ ರೈತರಿಂದ ಉಂಡೆಕೊಬ್ಬರಿ ಖರೀದಿಸುವ ಸಲುವಾಗಿ ಕಡೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಖರೀದಿ ಕೇಂದ್ರವನ್ನು ತೆರೆಯಲಾಗಿದೆ. 2013-14ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್ ಕೊಬ್ಬರಿಗೆ 5500ನಂತೆ ಬೆಂಬಲ ಬೆಲೆ ಘೋಷಿಸಿದೆ. ಈ ಬೆಲೆಯಡಿ ರೈತರು ಖರೀದಿ ಕೇಂದ್ರದಲ್ಲಿ ಎಎಕ್ಯೂ ಗುಣಮಟ್ಟದ ಕೊಬ್ಬರಿಯನ್ನು ಮಾರಾಟ ಮಾಡಿ ಈ ಯೋಜನೆಯ ಫಲ ಪಡೆಯಬಹುದಾಗಿದೆ. ಈ ಸಂಬಂಧ ಕಡೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ವ್ಯಾಪಕ ಪ್ರಚಾರ ಕೈಗೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಮಾರ್ಕೆಟಿಂಗ್ ಫೆಡರೇಷನ್, ಕಡೂರು ಇವರನ್ನು ಸಂಪರ್ಕಿಸಲು ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.