ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಮಂಜುನಾಥ್‌ಗೆ ಪತ್ರಕರ್ತರ ಸಂಘ ಸಂತಾಪ

Vishwanath S
Updated On : 24 Jun 2013, 11:51 am

ಮೂಡಿಗೆರೆ: ಬೆಂಗಳೂರು ಗ್ರಾಮಾಂತರ ಭಾಗದ ಹೊಸಕೋಟೆ ಸಮೀಪದ ಚಿಕ್ಕತಗಳಿ ಗ್ರಾಮದಲ್ಲಿ ವರದಿ ಮಾಡಲು ತೆರಳಿದಾಗ ಕಾಡಾನೆ ತುಳಿತಕ್ಕೆ ಬಲಿಯಾದ ವಿಜಯವಾಣಿ ವರದಿಗಾರ ಮಂಜುನಾಥ್‌ಗೆ ಮೂಡಿಗೆರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ತಾಲೂಕು ಪತ್ರಕರ್ತರ ಸಂಘ ಸಂತಾಪ ಸೂಚಿಸಿದೆ. ಈ ಕುರಿತು ಭಾನುವಾರ ಹೇಳಿಕೆ ನೀಡಿರುವ ಸಂಘಗಳು ರಾಜ್ಯದ ವಿವಿಧ ಭಾಗದಲ್ಲಿ ಕಾಡಾನೆಗಳು ಊರೊಳಗೆ ನಿರಂತರ ಲಗ್ಗೆಯಿಡುತ್ತಿದ್ದರೂ ಅವುಗಳ ಆರ್ಭಟ ತಡೆಗಟ್ಟುವಲ್ಲಿ ಅರಣ್ಯ ಇಲಾಖೆಗಳು ಸಂಪೂರ್ಣ ವಿಫಲವಾಗಿದೆ. ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಬಾರದಂತೆ ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಕೆ. ಮಂಜುನಾಥ್, ಗೌರವಾಧ್ಯಕ್ಷ ಹೊರಟ್ಟಿ ರಘು ಸದಸ್ಯರು ಹಾಗೂ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎ.ಆರ್. ಉದಯಶಂಕರ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement