ಧಾರಾಕಾರ ಮಳೆ
ಶೃಂಗೇರಿ: ಭಾನುವಾರ ರಾತ್ರಿಯಿಂದ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ. ಕೆರೆಕಟ್ಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ತುಂಗಾ ನದಿ ತುಂಬಿ ಹರಿಯುತ್ತಿದೆ. ಹಳ್ಳ, ಕೆರೆ, ಕಾಲುವೆಗಳು ಮಳೆಯಿಂದ ತುಂಬಿ ಹರಿಯುತ್ತಿವೆ. ಗಾಳಿಯ ಆರ್ಭಟಕ್ಕೆ ಅಲ್ಲಲ್ಲಿ ಅಡಕೆ ಮರಗಳು ಧರೆಗುರುಳಿವೆ. ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಉತ್ತಮ ಮಳೆಯಾಗುತ್ತಿರುವುದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ತಾಲೂಕಿನಾದ್ಯಂತ ಕೃಷಿ ಚಟುವಟಿಕೆಗಳು ಭರದಿಂದ ಸಾಗಿದೆ. ಬತ್ತದ ಸಸಿಮುಡಿ ಕೆಲಸ ಚುರುಕುಗೊಂಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.