ಇಂದು ಸಂತ್ರಸ್ತರಿಗೆನಿಧಿ ಸಂಗ್ರಹ
ಚಿಕ್ಕಮಗಳೂರು: ಉತ್ತರಾಖಂಡ್ ರಾಜ್ಯದ ನೆರೆ ಸಂತ್ರಸ್ತರಿಗೆ ನೆರವು ಒದಗಿಸುವ ನಿಟ್ಟಿನಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಗುರುವಾರ ನಗರದಲ್ಲಿ ನಿಧಿ ಸಂಗ್ರಹ ಅಭಿಯಾನ ಹಮ್ಮಿಕೊಂಡಿದೆ. ಪ್ರಕೃತಿ ವಿಕೋಪದ ವೇಳೆ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರಿ ವಿಜಯಪುರ ಬಡಾವಣೆಯ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ಬೆಳಿಗ್ಗೆ 10 ಗಂಟೆಗೆ ವಿಶೇಷಪೂಜೆ, ಪ್ರಾರ್ಥನೆ ಮತ್ತು ಶ್ರದ್ಧಾಂಜಲಿ ಸಭೆ ನಡೆಸಲಿದೆ.
ನಂತರ ಶಾಸಕ ಸಿ.ಟಿ.ರವಿ, ಬಸವಮಂದಿರದ ಶ್ರೀ ಜಯಬಸವಾನಂದ ಸ್ವಾಮೀಜಿ, ಶಂಕರದೇವರ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮತ್ತು ಬೇರುಗಂಡಿ ಮಠದ ಶ್ರೀ ರೇಣುಕ ಮಹಾಂತ ಶಿವಾಚಾರ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಪದಾಧಿಕಾರಿಗಳು ಮತ್ತು ಯೋಗಬಂಧುಗಳು ಪಾದಯಾತ್ರೆ ಮೂಲಕ ನಿಧಿ ಸಂಗ್ರಹ ಮಾಡಲಿದ್ದಾರೆ.