ಪರಿಸರ ದಿನಾಚಾರಣೆ
ಶೃಂಗೇರಿ: ತಾಲೂಕಿನ ವಿದ್ಯಾರಣ್ಯಪುರ ಪಂಚಾಯಿತಿ ತ್ಯಾವಣ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ರೋಟರಿ ಕ್ಲಬ್ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚಾರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ರೋಟರಿ ನಿಕಟಪೂರ್ವ ಅಧ್ಯಕ್ಷ ಮಹೇಶ್ ಕಾರ್ಯಕ್ರಮ ಉದ್ಘಾಟಿಸಿ, ಪರಿಸರ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಸ್ವಾಭಾವಿಕ ಅರಣ್ಯ ಉಳಿಸುವುದರ ಜೊತೆಗೆ ಗಿಡಮರಗಳನ್ನು ನೆಟ್ಟು ಪೋಷಿಸಿ ಸಂರಕ್ಷಿಸಬೇಕು. ಕೇವಲ ದಿನಾಚಾರಣೆಗಳಿಗೆ ಸೀಮಿತವಾಗಿರದೆ ಪರಿಸರ ದಿನಾಚಾರಣೆ ಕಾರ್ಯರೂಪಕ್ಕೆ ಬರಬೇಕು ಎಂದರು. ಡಾ.ಅನೀತ್ ಕುಮಾರ್, ಸಿದ್ದಪ್ಪ ಮೊದಲಾದವರು ಉಪಸ್ಥಿತರಿದ್ದರು. ಅನಿತಾ ಸ್ವಾಗತಿಸಿದರು.