ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಅಪರಾಧ ಹಿನ್ನೆಲೆ: ಸಿಸಿ ಟಿವಿ ಅಳವಡಿಕೆ

Rashmi Kasaragodu
Updated On : 29 Jun 2013, 10:44 am

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮೂಡಿಗೆರೆ ತಾಲೂಕಿನ ಬಣಕಲ್ನಲ್ಲಿ ಸಿ.ಸಿ. ಟಿವಿ ಅಳವಡಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಎನ್. ಶಶಿಕುಮಾರ್ ಹೇಳಿದ್ದಾರೆ.
ಈ ಮಾರ್ಗದಲ್ಲಿ ಸಂಚಿರುವ ಪ್ರತಿಯೊಂದು ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ಅಲ್ಲಿರುವ ಪ್ರಯಾಣಿಕರ ಸಂಖ್ಯೆ ಹಾಗೂ ವಾಹನಗಳ ನೋಂದಣಿ ಸಂಖ್ಯೆಯನ್ನು ದಾಖಲಿಸಿಕೊಳ್ಳಲಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ವರ್ಷದಲ್ಲಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಒಟ್ಟು ಮೂರು ಕೊಲೆ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಗ್ರಾಮದಲ್ಲೂ ಕೂಡ ಚಾರ್ಮಾಡಿ ಮಾರ್ಗದಲ್ಲಿ  ಸಿ.ಸಿ. ಟಿವಿ ಅಳವಡಿಸಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement