ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಬೀಳ್ಕೊಡುಗೆ

Rashmi Kasaragodu
Updated On : 29 Jun 2013, 10:44 am

ಚಿಕ್ಕಮಗಳೂರು: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಬಡ್ತಿ ಪಡೆದು ವರ್ಗಾವಣೆಗೊಂಡಿರುವ  ಕ್ಷೇತ್ರ ಸಮನ್ವಯಾಧಿಕಾರಿ ರಾಜೇಗೌಡ ಅವರಿಗೆ ಕಚೇರಿ ಸಿಬ್ಬಂದಿ ಇತ್ತೀಚೆಗೆ ಬೀಳ್ಕೊಡುಗೆ ನೀಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಪ ಸಮನ್ವಯಾಧಿಕಾರಿ ವೆಂಕಟರಾಮು, ರಾಜೇಗೌಡ ಅವರ ನಡೆ- ನುಡಿ, ಶಿಸ್ತು, ಸಮಯಪಾಲನೆ ಮತ್ತು ಕರ್ತವ್ಯ ಪ್ರಜ್ಞೆ ಇತರ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆದರ್ಶವಾಗಬೇಕು ಎಂದರು. ರಾಜೇಗೌಡ ಅವರು ತಮ್ಮ ಅವಧಿಯಲ್ಲಿ ಅನೇಕ ಸಂಪನ್ಮೂಲ ವ್ಯಕ್ತಿಗಳನ್ನು ತಯಾರು ಮಾಡುವ ಮೂಲಕ ಕಚೇರಿಗೆ ಉತ್ತಮ ಕಾಯಕಲ್ಪ ನೀಡಿದ್ದಾರೆ. ಉಪನ್ಯಾಸಕ ಮತ್ತು ಅಧಿಕಾರಿಯಾಗಿಯೂ ಜನಮನ್ನಣೆ ಗಳಿಸಿದ್ದಾರೆ ಎಂದು ಶ್ಲಾಘಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಜೇಗೌಡ, ಕ್ಷೇತ್ರ ಸಮನ್ವಯಾಧಿಕಾರಿಯಾಗಿ ಮತ್ತು ಉಪನ್ಯಾಸಕರಾಗಿ ತಾವು ಸಲ್ಲಿಸಿರುವ ಸೇವೆ ತಮಗೆ ಅತ್ಯಂತ ತೃಪ್ತಿ ಮತ್ತು ಹೆಮ್ಮೆ ತಂದಿದೆ. ತಮ್ಮ ಸೇವಾವಧಿಯಲ್ಲಿ ಸಹಕರಿಸಿದ ಸಿಬ್ಬಂದಿಗಳಿಗೆ ಮತ್ತು ಸಹಪಾಠಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಸೋಮಶೇಖರ್, ನಾಗರಾಜ್, ಕುಮಾರ್, ಸಂಪನ್ಮೂಲ ವ್ಯಕ್ತಿ ರೇವಣ್ಣಗೌಡ, ಸೋಮಶೇಖರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments