ಪ್ರತಿಭಾ ಪುರಸ್ಕಾರ
ಚಿಕ್ಕಮಗಳೂರು: ಅಂಜುಮಾನ್ ಇ ಖುದ್ದಾಂ ವೆಲ್ಫೇರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಜೂ.30ರಂದು ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು.
ನಗರದ ಕುವೆಂಪು ಕಲಾಮಂದಿರದಲ್ಲಿ ಬೆಳಗ್ಗೆ 10.30ಕ್ಕೆ ನಡೆಯುವ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಅಭಯಚಂದ್ರ ಜೈನ್, ಸಂಸದ ಜಯಪ್ರಕಾಶ್ ಹೆಗ್ಡೆ, ಶಾಸಕ ಸಿ.ಟಿ. ರವಿ, ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮೂರ್ತಿ ಭಾಗವಹಿಸಲಿದ್ದಾರೆ. ಮಹಮ್ಮದ್ ಹನೀಫ್ ಅಧ್ಯಕ್ಷತೆ ವಹಿಸಲಿದ್ದು, ವಿಶೇಷ ಆಹ್ವಾನಿತರಾಗಿ ಜಮೀಲ್ ಪಾಷ, ಅಬ್ದುಲ್ ಸತ್ತಾರ್, ಜೀಯಾವುಲ್ಲಾ ಖಾನ್, ಅಬ್ದುಲ್ ಸತ್ತಾರ್, ಮೊಹಿಯುದ್ದೀನ್ ರಷಾಧಿ, ಮಮ್ತಾಜ್ ಆಲಿ ಮತ್ತು ಮಹಮದ್ ಸಿದ್ದೀಕ್ ಸಾಹಿತ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಅರ್ಜಿ ಆಹ್ವಾನ
ಚಿಕ್ಕಮಗಳೂರು: ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆ ಮತ್ತು ಸೌಲಭ್ಯಗಳ ಪ್ರಯೋಜನ ಪಡೆಯಲು ಫಲಾನುಭವಿಗಳು ಜು.31ರ ವರೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಮತ್ತು ಹೆಚ್ಚಿನ ಮಾಹಿತಿಗೆ ನಿಗಮದ ಕಚೇರಿ, ಆಯಾ ತಾಲೂಕು ವಿಸ್ತರಣಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.
ತಪಾಸಣಾ ಶಿಬಿರ
ರಾಷ್ಟ್ರೀಯ ಮಧುಮೇಹ, ಕ್ಯಾನ್ಸರ್, ಹೃದಯ ಸಂಬಂಧಿತ (ಸಿವಿಡಿ) ಹಾಗೂ ಪಾರ್ಶ್ವ ವಾಯು ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮದಡಿ, ಶಿವಮೊಗ್ಗದ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ತಜ್ಞ ವೈದ್ಯರಿಂದ ಉಚಿತ ಕ್ಯಾನ್ಸರ್ (ಅರ್ಬುದ) ರೋಗ ಪತ್ತೆಹಚ್ಚುವ ಹಾಗೂ ಸಲಹಾ ಶಿಬಿರವನ್ನು ಜು.11ರಂದು ಸಾರ್ವಜನಿಕ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಲ್ಯಾಣಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಚಿಕ್ಕಮಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.