ಪ್ರವೇಶಕ್ಕೆ ಬ್ಯಾಂಕ್ ಖಾತೆ ಕಡ್ಡಾಯ
ಚಿಕ್ಕಮಗಳೂರು: ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ 2013-14ನೇ ಸಾಲಿಗೆ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹಾಗೂ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ನಂಬರ್ ಹಾಗೂ ರಾಷ್ಟ್ರೀಕೃತ ಬ್ಯಾಂಕಿನ ಉಳಿತಾಯ ಖಾತೆಯ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿಗಳನ್ನು ಹಾಗೂ ಇತರೆ ದಾಖಲಾತಿಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕಾಗಿದೆ ಎಂದು ತರೀಕೆರೆ ಸಮಾಜ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.