ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಶಾಲಾ ಮಕ್ಕಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ

Rashmi Kasaragodu
Updated On : 2 Mar 2013, 10:55 am

ಚಿಕ್ಕಮಗಳೂರು: ಶಾಲಾ ಮಕ್ಕಳಿಗೆ ವಿವಿಧ ಇಲಾಖೆಗಳಿಂದ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಪಿ. ಶಿವಶಂಕರ್ ಹೇಳಿದ್ದಾರೆ.
ಕರ್ನಾಟಕ ಬಾಲವಿಕಾಸ ಅಕಾಡೆಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕುವೆಂಪು ಕಲಾಮಂದಿರದಲ್ಲಿ ಗುರುವಾರ ನಡೆದ ಮಕ್ಕಳ ಹಬ್ಬ- 2013 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಟ್ಟುಗೂಡಿಸಿ ನಡೆಸುತ್ತಿರುವುದು ಉತ್ತಮ ಕಾರ್ಯ. ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳಿಂದ ಮಕ್ಕಳ ಪ್ರತಿಭೆ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹೊರಬರುವಂತಾಗಿದೆ ಎಂದರು.
ಜಿಲ್ಲಾಧಿಕಾರಿ ಯಶವಂತ್ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕಾಂತರಾಜು, ಡಿವೈಎಸ್ಪಿ ಎಸ್.ಎಲ್. ನಾಯಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ  ನಿರೂಪಣಾಧಿಕಾರಿ ಬಸವರಾಜು ಇದ್ದರು.
ಇಂದು ನಗರದಲ್ಲಿ ವಿದ್ಯುತ್ ವ್ಯತ್ಯಯ
ಚಿಕ್ಕಮಗಳೂರು: ಆಲ್ದೂರು- ಬಾಳೆಹೊನ್ನೂರು 66 ಕೆ.ವಿ. ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ 2 ರಂದು  ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಬಾಳೆಹೊನ್ನೂರು ಮತ್ತು ಆಲ್ದೂರು ಹಾಗೂ  ಕೊಪ್ಪ, ಶೃಂಗೇರಿ, ಕಳಸ ಮತ್ತು ಜಯಪುರ ವಿ.ವಿ. ಕೇಂದ್ರದ ನಗರ, ಗ್ರಾಮೀಣ ಫೀಡರ್ಗಳಿಂದ ಹೊರಹೊಮ್ಮುವ ಎಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement