ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಹೆಚ್ಚುತ್ತಿರುವ ಮಹಿಳೆಯರ ಶೋಷಣೆ

Rashmi Kasaragodu
Updated On : 2 Mar 2013, 10:55 am

ಚಿಕ್ಕಮಗಳೂರು: ದೇಶದಲ್ಲಿ ಸಾಮಾಜಿಕ ಮೌಲ್ಯಗಳು ಕುಸಿಯುತ್ತಿರುವ ಪರಿಣಾಮ ಮಹಿಳೆಯರ ಮೇಲೆ ಶೋಷಣೆಗಳು ಹೆಚ್ಚುತ್ತಿವೆ. ಮೌಲ್ಯಾಧಾರಿತ ಶಿಕ್ಷಣದಿಂದ ಶೋಷಣೆಯ ಪಿಡುಗನ್ನು ನಿರ್ಮೂಲನೆ ಮಾಡಬಹುದು ಎಂದು ಪ್ರಧಾನ ಜಿಲ್ಲಾ ಮತು ಸೆಷನ್ಸ್ ನ್ಯಾಯಾಧೀಶರಾದ ಬಸವರಾಜ್ ಎ. ಪಾಟೀಲ್ ಹೇಳಿದ್ದಾರೆ.
 ನಗರದ ಡಿಎಸಿಜಿ ಸರ್ಕಾರಿ ಪಾಲಿಟೆಕ್ನಿಕ್ ಆವರಣದಲ್ಲಿ ಇತ್ತೀಚೆಗೆ ನಡೆದ ಕಾನೂನು ಅರಿವು- ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಜೀವನ ಎಂಬುದು ಕೇವಲ ಉಪಭೋಗಕ್ಕಾಗಿ ಅಷ್ಟೇ ಇಲ್ಲ, ಸಾಮಾಜಿಕ ಸೇವೆ ಸಲ್ಲಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲೂ ಇದೆ. ಪ್ರಸ್ತುತ ಸಮಾಜದಲ್ಲಿ ಮಹಿಳೆಯರು ಮತ್ತು ಮಕ್ಕಳನ್ನು ಅನೈತಿಕ ಸಾಗಾಣಿಕೆ ಮೂಲಕ ಅವರ ಮೇಲೆ ದೌರ್ಜನ್ಯವೆಸಗುತ್ತಿರುವುದು ಹೆಚ್ಚಾಗಿದ್ದು, ಇಂತಹ ಕಾರ್ಯಗಳನ್ನು ತಡೆಗಟ್ಟುವ ದಿಸೆಯಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕಾಗಿರುವುದು ಅವಶ್ಯಕ ಎಂದ ಅವರು, ಈ ಮೂಲಕ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ ಎಂದು ತಿಳಿಸಿದರು.
 ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ವಕೀಲೆ ಡಿ.ಎಸ್. ಮಮತ ಲೈಂಗಿಕ ಶೋಷಣೆಯಿಂದ ಸಂರಕ್ಷಣೆ ಹಾಗೂ ಸ್ವಯಂ ಕೌಶಲ್ಯ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಸಿ.ಪಿ. ಗಣಪತಿ ಮಾತನಾಡಿದರು. ವಕೀಲರ ಸಂಘದ ಖಜಾಂಚಿ ಪಿ. ಪರಮೇಶ್, ಉಪನ್ಯಾಸಕಿಯರಾದ ಪುಷ್ಪಲತಾ ಮತ್ತು ನಾಗಶ್ರೀ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ನಯನ ಕಾರ್ಯಕ್ರಮ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement