ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಕಟ್ಟಳೆ ಸಡಿಲಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ

Mainashree
Updated On : 3 Mar 2013, 12:14 pm

ಕನ್ನಡಪ್ರಭವಾರ್ತೆ, ಚಿಕ್ಕಮಗಳೂರು, ಮಾ. 2
ಚುನಾವಣೆಗೆ ವಿಧಿಸಿರುವ ಕೆಲವು ಕಟ್ಟಳೆಗಳನ್ನು ಸಡಿಲಗೊಳಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ ಮಾಡಿದೆ.
ಈ ಸಂಬಂಧ ಶುಕ್ರವಾರ ಆಯೋಗದ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು ಎಂದು ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ ಸುದ್ದಿಗೋಷ್ಠಿಯಲ್ಲಿ ಶನಿವಾರ ತಿಳಿಸಿದರು.
ಚುನಾವಣೆ ಎಂದರೆ ಸಂಭ್ರಮದ ವಾತಾವರಣ ಇರಬೇಕು. ಆದರೆ, ಇದೀಗ ಚುನಾವಣಾ ಆಯೋಗ ವಿಧಿಸಿರುವ ಕೆಲವು ನಿಯಮಗಳಿಂದ ಸೂತಕದ ಛಾಯೆ ಮೂಡಿದೆ. ಅದುದರಿಂದ ಚುನಾವಣಾ ಸಂಧರ್ಭದಲ್ಲಿ ಅವರವರ ಪಕ್ಷದ ಬಾವುಟಗಳನ್ನು ಸ್ವಇಚ್ಛೆಯಿಂದ ತಮ್ಮ ತಮ್ಮ ಮನೆಗಳ ಮೇಲೆ ಹಾರಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಲಾಗಿದೆ ಎಂದರು.
ಇಂಟರ್ ನೆಟ್ ಮೂಲಕ ಮತದಾನಕ್ಕೆ ಅವಕಾಶ ಮಾಡಿಕೊಡುವಂತೆ ವಿನಂತಿಸಲಾಗಿದ್ದು, ಈ ರೀತಿ ಮಾಡುವುದರಿಂದ ಶೇಕಡವಾರು ಮತದಾನದ ಪ್ರಮಾಣ ಹೆಚ್ಚಳವಾಗಲಿದೆ. ಅದೇ ರೀತಿ ವೃದ್ಧರು ಮತ್ತು ಮಹಿಳೆಯರಿಗೆ ಮತಗಟ್ಟೆಯಲ್ಲಿ ಮತದಾನ ಮಾಡಲು ಪ್ರತ್ಯೇಕ ಸರತಿ ಸಾಲುಗಳನ್ನು ರಚಿಸಲು ಕೋರಿಕೆ ಸಲ್ಲಿಸಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement