ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಸುದ್ದಿ ಸಂಕ್ಷೇಪ

Mainashree
Updated On : 3 Mar 2013, 12:15 pm

ಮನೆ, ಮನೆಗೆ ತೆರಳಿ ಮತಯಾಚನೆ
ನರಸಿಂಹರಾಜಪುರ: ಜೆಡಿಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಎಚ್.ಟಿ. ರಾಜೇಂದ್ರ ಅವರು  ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಶನಿವಾರ ಮನೆ, ಮನೆಗೆ ತೆರಳಿ ಮತಯಾಚನೆ ಮಾಡಿದರು. ಮಿನಿ ವಿಧಾನಸೌಧದ ಸಮೀಪದಿಂದ ಹೊರಟ ಎಚ್.ಟಿ. ರಾಜೇಂದ್ರ, ಜೆಡಿಎಸ್ ಮುಖಂಡರು ಹಾಗೂ ಅಭ್ಯರ್ಥಿಗಳು ಮುಖ್ಯರಸ್ತೆಯಲ್ಲಿ ಬರುವ ಮನೆ, ಅಂಗಡಿಗಳಿಗೆ ತೆರಳಿ ಜೆಡಿಎಸ್ ಬೆಂಬಲಿಸುವಂತೆ ಮನವಿ ಮಾಡಿದರು. ಪಟ್ಟಣ ಪಂಚಾಯ್ತಿಯ ಚುನಾವಣೆಯಲ್ಲಿ ಜೆಡಿಎಸ್ ಸಮರ್ಥ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ. 11 ವಾರ್ಡುಗಳಲ್ಲೂ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತನ್ನಿ ಎಂದು ಅವರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಯುವ ಮೋರ್ಚ ಉಪಾಧ್ಯಕ್ಷ ಕಣುವೆ ವಿನಯ, ತಾಲೂಕು ಜೆಡಿಎಸ್ ಅಧ್ಯಕ್ಷ ಇ.ಸಿ. ಜೋಯಿ, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ದೀಪ ಉಮಾಶಂಕರ್, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಸತ್ಯನಾರಾಯಣ ಶೆಟ್ಟಿ, ತಾಲೂಕು ಪಂಚಾಯ್ತಿ ಸದಸ್ಯ ಎಸ್.ಎಸ್. ಶಾಂತಕುಮಾರ್, ಜೆಡಿಎಸ್ ಮುಖಂಡರಾದ ಸುಂದರೇಶ್, ಎಂ.ಓ. ಜೋಯಿ, ಉದಯ್, ಬಿ.ಟಿ.ರವಿ, ಗ್ರಾಮ ಪಂಚಾಯ್ತಿ ಸದಸ್ಯೆ ರೇವತಿ, ಪಟ್ಟಣ ಪಂಚಾಯ್ತಿ ಅಭ್ಯರ್ಥಿಗಳಾದ ಸುಬಾನ್, ಸಿಗ್ಬುತುಲ್ಲಾ ಮುಂತಾದವರಿದ್ದರು.
ಕಾಂಗ್ರೆಸ್ ಮತಯಾಚನೆ
ನರಸಿಂಹರಾಜಪುರ: ಜಿಪಂ ಮಾಜಿ ಅಧ್ಯಕ್ಷ ಟಿ.ಡಿ. ರಾಜೇಗೌಡ ಪಪಂ ಕಾಂಗ್ರೆಸ್ ಅಭ್ಯರ್ಥಿಗಳ ಪರ ಶನಿವಾರ ಪಟ್ಟಣದ 11 ವಾರ್ಡುಗಳಲ್ಲೂ ಬಿರುಸಿನ ಪ್ರಚಾರ ನಡೆಸಿದರು.  ಈ ಸಂದರ್ಭದಲ್ಲಿ ಮಾತನಾಡಿ, ಶೃಂಗೇರಿ ಕ್ಷೇತ್ರದಲ್ಲಿ 6 ದಿನಗಳ ಪ್ರವಾಸ ಕೈಗೊಂಡಿದ್ದು, ನರಸಿಂಹರಾಜಪುರ, ಕೊಪ್ಪ ಹಾಗೂ ಶೃಂಗೇರಿ ಪಟ್ಟಣಗಳಲ್ಲಿ ಮತದಾರರನ್ನು ಬೇಟಿ ಮಾಡುತ್ತಿರುವುದಾಗಿ ಹೇಳಿದರು.  ಪಟ್ಟಣ ಅಭಿವೃದ್ಧಿ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಪ್ರಚಾರ ಮಾಡುತ್ತಿದ್ದಾರೆ. ಆದರೆ, ಪಟ್ಟಣದ ಅಭಿವೃದ್ಧಿಯಲ್ಲಿ ಕೇಂದ್ರ ಸರ್ಕಾರದ ಅನುದಾನ ಸೇರಿದೆ. ಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಗೆಲ್ಲಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸೋಮೇಶ್, ಮಂಜುನಾಥ್, ಅಭ್ಯರ್ಥಿಗಳಾದ ಆರ್. ಶಂಕರ್, ಲಕ್ಷ್ಮಣಶೆಟ್ಟಿ, ರಘವೀರ್, ಕೆ.ಎಂ. ಸುಂದರೇಶ್ ಇದ್ದರು.
ಜೇಷ್ಠತಾ ಪಟ್ಟಿ ಪ್ರಕಟ
ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಪಟ್ಟಿ ಕುರಿತಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಮಾ. 4ರೊಳಗೆ ಸಂಬಂಧಿಸಿದ ಬ್ಲಾಕ್‌ಗಳ ಕ್ಷೇತ್ರ ಶಿಕ್ಷಣಾಧಿಕಾರಿ ಅಥವಾ  ಉಪ ನಿರ್ದೇಶಕರು (ಆಡಳಿತ) ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು ಇವರಿಗೆ ಸಲ್ಲಿಸಲು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement