ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

'ಸ್ಫರ್ಧಾತ್ಮಕ ಪರೀಕ್ಷೆ ಎದುರಿಸಲು ಸಾಮಾನ್ಯ ಜ್ಞಾನ ಅಗತ್ಯ'

Mainashree
Updated On : 3 Mar 2013, 12:13 pm

ನರಸಿಂಹರಾಜಪುರ:  ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮ್ಯಾನೇಜ್‌ಮೆಂಟ್ ಕ್ಲಬ್ ಆಶ್ರಯದಲ್ಲಿ ಕಾಲೇಜಿನ ಅಂತರ ವಿಭಾಗದ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮವು ಕಾಲೇಜಿನ ಆವರಣದಲ್ಲಿ ನಡೆಯಿತು.
ಸಭೆಯಲ್ಲಿ ಉಪಸ್ಥಿತರಿದ್ದ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥ ಕೆ. ಉಮೇಶ್ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಜ್ಞಾನದ ಮಟ್ಟ ಹೆಚ್ಚಿಸಿಕೊಳ್ಳಲು ರಸಪ್ರಶ್ನೆ ಕಾರ್ಯಕ್ರಮವು ಸಹಾಯವಾಗಲಿದೆ. ಸಾಮಾನ್ಯ ಶಿಕ್ಷಣದಿಂದ ಬದುಕನ್ನು ರೂಪಿಸಿಕೊಳ್ಳಲು ಸಾಧ್ಯವಿಲ್ಲ. ಪ್ರಪಂಚದ ಉತ್ತಮ ಗುಣ ಮಟ್ಟದ 200 ವಿಶ್ವವಿದ್ಯಾಲಯದ ಪಟ್ಟಿಯಲ್ಲಿ ಭಾರತ ಇಲ್ಲ ಎಂಬುದು ವಿಷಾದಕರವಾಗಿದೆ. ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಬೇಕಾದರೆ ಸಾಮಾನ್ಯ ಜ್ಞಾನ ಅಗತ್ಯ ಎಂದರು.  
ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಮುಜೀಬ್ ಖಾನ್ ಪ್ರಾಸ್ತಾವಿಕವಾಗಿ ಮಾತನಾಡಿ, ರಸಪ್ರಶ್ನೆ ಕಾರ್ಯಕ್ರಮದಿಂದ ವಿದ್ಯಾರ್ಥಿಗಳ ಜ್ಞಾನದ ಮಟ್ಟ ಹೆಚ್ಚಲಿದೆ ಎಂದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಪೂರ್ಣೇಶ್ ಕಾರ್ಯಕ್ರಮ ಉದ್ಘಾಟಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement