ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಜನಪರ ಆಡಳಿತಕ್ಕೆ ಕಾಂಗ್ರೆಸ್ ಬದ್ಧ

Lingaraj Badiger
Updated On : 4 Mar 2013, 11:12 am

ಶೃಂಗೇರಿ: ಸ್ಥಳೀಯ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಮತದಾರರು ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದು, ಪಕ್ಷ ಉತ್ತಮ ಜನಪರ ಆಡಳಿತ ನೀಡಲು ಬದ್ಧವಾಗಿದೆ ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸೌಭಾಗ್ಯ ಗೋಪಾಲನ್ ತಿಳಿಸಿದ್ದಾರೆ.
ಅವರು ಪಪಂ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಮಹತ್ತರ ಸಭೆಯಲ್ಲಿ ಮಾತನಾಡಿ, ಈಗಾಗಲೇ ಪಕ್ಷ ದಕ್ಷ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು ಭ್ರಷ್ಟಾಚಾರ ರಹಿತ, ಜನಪರ, ಪಾರದರ್ಶಕ ಆಡಳಿತ ನೀಡಲಿದೆ.11 ವಾರ್ಡ್‌ಗಳಿಗೆ 11 ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಯಾವುದೇ ರೀತಿಯ ಗೊಂದಲ, ಭಿನ್ನಾಭಿಪ್ರಾಯಗಳಿಲ್ಲದೆ ಪಕ್ಷದ ಗೆಲುವಿಗಾಗಿ ಶ್ರಮಿಸಲಾಗುತ್ತಿದೆ ಎದರು.
ಪಟ್ಟಣದಲ್ಲಿ ಸಾಕಷ್ಟು ಮೂಲ ಸೌಕರ್ಯಗಳ ಕೊರೆತೆಯಿದ್ದು ಅವುಗಳ ಪರಿಹಾರಕ್ಕೆ ಪ್ರಯತ್ನ ಮಾಡಲಾಗುವುದು. ರಸ್ತೆ, ಕುಡಿಯುವ ನೀರು, ಆರೋಗ್ಯ, ನೈರ್ಮಲೀಕರಣ ಸೇರಿದಂತೆ ಮೂಲ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.
ಕಾಂಗ್ರೆಸ್ ಪಕ್ಷದ ರಾಜೇಶ್, ರಾಜಶೇಖರ್, ಸತೀಶ್, ಉದಯ್ ಕುಮಾರ್, ಕೆ.ಆರ್. ವೆಂಕಟೇಶ್, ಪೂರ್ಣಿಮಾ ಸಿದ್ದಪ್ಪ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement