ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಮತದಾರರ ಒಲವು ಕಾಂಗ್ರೆಸ್‌ಗೆ

Lingaraj Badiger
Updated On : 5 Mar 2013, 10:51 am

ಮೂಡಿಗೆರೆ: ಸ್ಥಳೀಯಾಡಳಿತ ಚುನಾವಣೆಯಲ್ಲಿ ಮತದಾರರ ಒಲವು ಕಾಂಗ್ರೆಸ್ ಕಡೆ ಇರುವುದರಿಂದ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಯಾವುದೇ ರೀತಿಯ ಆತಂಕ ಕಾಣಿಸುತ್ತಿಲ್ಲ ಎಂದು ಮಾಜಿ ಸಚಿವ ಬಿ.ಬಿ. ನಿಂಗಯ್ಯ ಹೇಳಿದರು.
ಅವರು ಸೋಮವಾರ ಮೂಡಿಗೆರೆ ಪಟ್ಟಣದ ಛತ್ರಮೈದಾನದ ವಾರ್ಡ್‌ನಲ್ಲಿ ಪಕ್ಷದ ಪರ ಮತಯಾಚಿಸಿ ಮಾತನಾಡುತ್ತಿದ್ದರು.
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಮನೆ, ಮನೆಗೆ ತೆರಳಿ ಮತ ಯಾಚಿಸುತ್ತಿದ್ದಾರೆ. ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಪ್ರತಿಫಲಾಪೇಕ್ಷೆ ಇಲ್ಲದೆ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದರು. ಜಿಪಂ ಸದಸ್ಯ ಎಂ.ಎಸ್. ಅನಂತ್, ತಾಪಂ ಸದಸ್ಯ ಸಬ್ಲಿ ದೇವರಾಜ್, ಕಾಂಗ್ರೆಸ್ ನಗರಾಧ್ಯಕ್ಷ ಸಿ.ಕೆ. ಇಬ್ರಾಹಿಂ, ಹಿರಿಯ ಮುಖಂಡರಾದ ಡಿ.ಎಸ್. ರಘು, ಅಹಮ್ಮದ್ ಬಾವ ಬಿಳಗುಳ, ಹೊಸಕೆರೆ ರಮೇಶ್, ಮುಖಂಡರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement