8ರಂದು ಕಾನೂನು ಕುರಿತ ತರಬೇತಿ ಕಾರ್ಯಗಾರ
ಕ.ಪ್ರ ವಾರ್ತೆ, ಚಿಕ್ಕಮಗಳೂರು, ಮಾ. 5
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಮಹಿಳೆಯರ ಕಾನೂನುಗಳ ತರಬೇತಿ ಕಾರ್ಯಾಗಾರ ಮತ್ತು ಮಹಿಳೆಯರ ಸಂರಕ್ಷಣಾ ಕಾಯ್ದೆ ಕುರಿತು ಜಾಗೃತಿ ಶಿಬಿರವನ್ನು ಮಾ. 8ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕುವೆಂಪು ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮವನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಸವರಾಜ್ ಎ. ಪಾಟೀಲ್ ಉದ್ಘಾಟಿಸಲಿದ್ದಾರೆ. ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ. ಶಿವಶಂಕರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ್, ವಕೀಲರ ಸಂಘದ ಅಧ್ಯಕ್ಷ ಕೆ.ಎಂ. ಅಬ್ದುಲ್ ಜಬ್ಬಾರ್ ಭಾಗವಹಿಸಲಿದ್ದಾರೆ.
ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ನಾರಾಯಣ ಶೇರಿಗಾರ್ ವೈದ್ಯಾಧಿಕಾರಿ ಡಾ. ಎಂ. ಶಶಿಕಲಾ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಮಮತ, ನ್ಯಾಯವಾದಿ ಸುಜೇಂದ್ರ ಉಪನ್ಯಾಸ ನೀಡಲಿದ್ದಾರೆ.