ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಬಿಜೆಪಿಗೆ ನಾಯಕತ್ವದ ಕೊರತೆ

Lingaraj Badiger
Updated On : 6 Mar 2013, 10:50 am

ಕ.ಪ್ರ. ವಾರ್ತೆ, ಚಿಕ್ಕಮಗಳೂರು, ಮಾ. 5
ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ಧೂಳಿಪಟವಾಗುವ ಭಯದಿಂದ ಕೆಜೆಪಿ ಬಗ್ಗೆ ಅಪಪ್ರಚಾರದಲ್ಲಿ ತೊಡಗಿವೆ. ಸತ್ಯ ತಿಳಿದಿರುವ ಮತದಾರರು ಕೆಜೆಪಿ ಕೈ ಹಿಡಿಯಲಿದ್ದಾರೆ ಎಂದು ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಹೇಳಿದ್ದಾರೆ.
 ನಗರದ ವಿಜಯಪುರ ಬಡಾವಣೆಯಲ್ಲಿ ಸೋಮವಾರ ಸಂಜೆ ನಡೆದ ನಗರಸಭೆ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರಕ್ಕೆ ನಾಯಕತ್ವದ ಧ್ವನಿಯೇ ಇಲ್ಲ.  ಮಹಿಳೆಯರ ಮೇಲೆ ದೌರ್ಜನ್ಯಗಳು ಹೆಚ್ಚಾದರೂ ಯಾವುದೇ ಸೂಕ್ತ ಕ್ರಮ ಕೈಗೊಳ್ಳದೆ ಕೈಕಟ್ಟಿ ಕುಳಿತಿರುವ ಸರ್ಕಾರಕ್ಕೆ ನಮ್ಮ ಧಿಕ್ಕಾರವಿದೆ ಎಂದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸೋಲುವ ಭಯದಿಂದ ಸ್ವತಃ ಮುಖ್ಯಮಂತ್ರಿಗಳೇ ಗಲ್ಲಿ ಗಲ್ಲಿಗಳಲ್ಲಿ ಪ್ರಚಾರಕ್ಕೆ ಇಳಿದಿರುವುದು ಅವರ ಪಕ್ಷದ ಹೀನಾಯ ಸ್ಥಿತಿಯನ್ನು ತೋರುತ್ತದೆ. ಸ್ಥಳೀಯ ಶಾಸಕರು ಅಭಿವೃದ್ಧಿ ಹೆಸರಿನಲ್ಲಿ ಹಣ ಕೊಳ್ಳ ಹೊಡೆದು ಸ್ವ ಅಭಿವೃದ್ಧಿಯಲ್ಲಿ ತೊಡಗಿದ್ದಾರೆ. ಚುನಾವಣೆ ಸಮಯದಲ್ಲಿ ಅಭಿವೃದ್ಧಿ ಮಂತ್ರ ಜಪಿಸುವ ಇವರು ಯಡಿಯೂರಪ್ಪನವರ ಯಾವುದೇ ಯೋಜನೆಗಳನ್ನು ಜನರಿಗೆ ತಲುಪಿಸುತ್ತಿಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement