ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಬಿಜೆಪಿ ಗೆಲವು: ದೇವರಾಜ್ ವಿಶ್ವಾಸ

Lingaraj Badiger
Updated On : 7 Mar 2013, 10:50 am

ಬೀರೂರು: ಬೀರೂರು ಹಾಗೂ ಕಡೂರು ಪುರಸಭೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿ ಅಧಿಕಾರದ ಗದ್ದುಗೆ ಹಿಡಿಯಲಿದ್ದು ಈ ಫಲಿತಾಂಶ ಬರಲಿರುವ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಬಿಜೆಪಿ ಮುಖಂಡ ಬೀರೂರು ದೇವರಾಜ್ ಹೇಳಿದ್ದಾರೆ.
 ಸುದ್ದಿಗಾರರೊಂದಿಗೆ ಮಾತನಾಡಿ, ಬೀರೂರು ಪುರಸಭೆಯಲ್ಲಿ ಕಳೆದ ಭಾರಿ ಕಡಿಮೆ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಗಳು ಪರಾಭವ ಹೊಂದಿದ್ದು ಈ ಭಾರಿ ಪಕ್ಷದ 21 ಅಭ್ಯರ್ಥಿಗಳು ಕಣದಲ್ಲಿದ್ದು ಕನಿಷ್ಠ 15 ವಾರ್ಡುಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದಾರೆ ಎಂದರು.
ಬಿಜೆಪಿಗೆ ಕಾಂಗ್ರೆಸ್ ಪ್ರತಿಸ್ಪರ್ಧಿಯಾಗಿದೆ ಹೊರತು ಯಾವುದೇ ಪಕ್ಷ ಅಲ್ಲ. ಕಾರ್ಯಕರ್ತರ ಪಡೆಯೊಂದಿಗೆ ಚುನಾವಣೆ ಎದುರಿಸುತ್ತಿದ್ದು ಎಲ್ಲ ವಾರ್ಡುಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಜೆಡಿಎಸ್ ಮತ್ತು ಕಾಂಗ್ರೆಸ್‌ಗೆ ಪ್ರಭಲ ಸ್ಪರ್ಧೆ ನೀಡಿದ್ದಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement