ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಗುಂಡಿಕ್ಕಿಕೊಂಡುವ್ಯಕ್ತಿ ಆತ್ಮಹತ್ಯೆ

Rashmi Kasaragodu
Updated On : 9 Mar 2013, 12:12 pm

ಮೂಡಿಗೆರೆ: ಜೀವನದಲ್ಲಿ ಜಿಗೂಪ್ಸೆ ಗೊಂಡ ವ್ಯಕ್ತಿಯೊಬ್ಬರು ತನ್ನ ಬಂದೂಕಿನಿಂದ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಣಕಲ್ ಠಾಣಾ ವ್ಯಾಪ್ತಿಯ ಚೆಕ್ಕೂಡು ಎಂಬಲ್ಲಿ ನಡೆದಿದೆ.  ಆತ್ಯಹತ್ಯೆಗೆ ಶರಣಾದ ವ್ಯಕ್ತಿ ಮಂಜುನಾಥ ಗೌಡ (74) ಎಂದು ತಿಳಿದು ಬಂದಿದ್ದು, ಕುಟುಂಬ ಕಲಹದಿಂದ ಬೇಸತ್ತು ಜೀವನದಲ್ಲಿ ಜಿಗೂಪ್ಸೆಗೊಂಡ ಮಂಜುನಾಥ ಗೌಡ  ಶುಕ್ರವಾರ ಬೆಳಗ್ಗೆ ತಮ್ಮ ಮನೆಯ ಕೊಠಡಿಯಲ್ಲಿ ಬಂದೂಕನ್ನು ತೆಗೆದುಕೊಂಡು ತಮ್ಮ ಎದೆಗೆ ಗುರಿ ಇಟ್ಟುಕೊಂಡು ಆತ್ಮಹತ್ಯ ಮಾಡಿಕೊಂಡಿದ್ದಾರೆಂದು ಮೃತರ ಸಂಬಂಧಿಕರು ಬಣಕಲ್ ಠಾಣೆಗೆ ದೂರು ನೀಡಿದ್ದು. ವೃತ್ತ ನಿರೀಕ್ಷಕ ರಮೇಶ್, ಠಾಣಾಧಿಕಾರಿ ಹೊಸ್ಕೇರಪ್ಪ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

12ರಂದು ಅಣ್ಣಾ ಹಜಾರೆ ಗದಗಕ್ಕೆ
ಗದಗ: ಸಾಮಾಜಿಕ ಕಾರ್ಯಕರ್ತ, ಗಾಂಧಿವಾದಿ, ಸಮಾಜ ಸುಧಾರಕ ಅಣ್ಣಾ ಹಜಾರೆ ಮಾ.12ರಂದು ಬೆಳಗ್ಗೆ 6.45ಕ್ಕೆ ನಗರದ ವಿದ್ಯಾದಾನ ಸಮಿತಿಯ ಮೈದಾನದಲ್ಲಿ ಭ್ರಷ್ಟಾಚಾರ ವಿರೋಧಿ ಆಂದೋಲನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಭಾರತೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ. ಎಸ್.ವೈ. ಚಿಕ್ಕಟ್ಟಿ ಹೇಳಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿರುವ ಅಣ್ಣಾ ಹಜಾರೆ ಇದೇ ಮೊದಲ ಬಾರಿಗೆ ಗದುಗಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಆಂದೋಲನದಲ್ಲಿ ಸಾವಿರಾರು ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಭ್ರಷ್ಟಾಚಾರ ವಿರುದ್ಧ ಸಾರ್ವಜನಿಕರಿಗೆ ತಿಳವಳಿಕೆ ನೀಡಿ, ಹೋರಾಟಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ರಾಜ್ಯದ ನಾಲ್ಕು ನಗರಗಳಲ್ಲಿ ಈ ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಕೆಲವೇ ದಿನಗಳಲ್ಲಿ ಬೆಂಗಳೂರು ಅಥವಾ ತುಮಕೂರಿನಲ್ಲೂ ನಡೆಯಲಿದೆ ಎಂದರು.

ಅತ್ಯಾಚಾರ ಆರೋಪ: ಎಸ್ಪಿಗೆ ಯುವತಿ ಮೊರೆ
ಬೆಳಗಾವಿ: ಇಟ್ನಾಳ ಗ್ರಾಮದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಪ್ರಕರಣದ ಬೆನ್ನ ಹಿಂದೆಯೇ ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಅತ್ಯಾಚಾರಕ್ಕೊಳಗಾದ ಯುವತಿ ಹಾಗೂ ಆಕೆಯ ಪಾಲಕರು ನ್ಯಾಯ ಕೋರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊರೆ ಹೋಗಿದ್ದಾರೆ. ರಾಯಬಾಗ ತಾಲೂಕಿನ ಯಬರಟ್ಟಿ ಗ್ರಾಮದ 17 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿದ್ದು, ಹುಕ್ಕೇರಿ ತಾಲೂಕಿನ ಹಿಡಕಲ್ ಗ್ರಾಮದ ಗಣೇಶ ಲಕ್ಷ್ಮಣ ಸಣ್ಣಕ್ಕನ್ನವರ (20) ಅತ್ಯಾಚಾರವೆಸಗಿದ ಆರೋಪಿ ಎಂದು ಜಿಲ್ಲಾ ಪೊಲೀಸ್ ವರಿಷ್ಠರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಉಚಿತ ಶಿಕ್ಷಣ: ಅರ್ಜಿ ಆಹ್ವಾನ
ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ 2013-14ನೇ ಸಾಲಿನಲ್ಲಿ ಉಚಿತ ಶಿಕ್ಷಣ ಪಡೆಯಲಿಚ್ಛಿಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.  2012- 13ನೇ ಸಾಲಿನಲ್ಲಿ ಶೈಕ್ಷಣಿಕ ರಂಗದಲ್ಲಿ ಉತ್ಕೃಷ್ಟ ಸಾಧನೆ ತೋರಿದವರು, ಕ್ರೀಡೆ (ಅಥ್ಲೆಟಿಕ್ಸ್), ಸಾಂಸ್ಕೃತಿಕ ರಂಗ (ಶಾಸ್ತ್ರೀಯ ಸಂಗೀತ, ರಾಜ್ಯ, ರಾಷ್ಟ್ರಮಟ್ಟದಲ್ಲಿ ಸಾಧನೆಗೈದ ಪ್ರತಿಭಾನ್ವಿತರಿಗೆ 6, 7, 8 ಮತ್ತು 9ನೇ ತರಗತಿಗಳಿಗೆ ಉಚಿತ ಶಿಕ್ಷಣದ ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ ಮೊ.9448625883, 9449616123 ಅನ್ನು ಸಂಪರ್ಕಿಸಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement