ಪತ್ನಿಯ ಕೊಲೆ: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ
ಕ.ಪ್ರ ವಾರ್ತೆ, ಚಿಕ್ಕಮಗಳೂರು, ಮಾ.8
ಕುಡಿಯಲು ಹಣ ಕೊಡಲು ನಿರಾಕರಿಸಿದಕ್ಕೆ ಮಹಿಳೆಯನ್ನು ಬರ್ಬರವಾಗಿ ಕೊಲೆಗೈದಾತಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
2012ರ ಜೂ.24ರಂದು ಕೂವೆ ಗ್ರಾಮದ ಕಲ್ಮನೆ ಕೆಳಪಾಲ್ ಪರಿಶಿಷ್ಟ ಕಾಲೋನಿಯಲ್ಲಿ ಚಂದ್ರಯ್ಯ ತನ್ನ ಹೆಂಡತಿ ಸುಧಾ ಅವರು ಮದ್ಯ ಕುಡಿಯಲು ಹಣ ನೀಡಲು ನಿರಾಕರಿಸಿ ಬೈದಿದಕ್ಕೆ ಕೋಪಗೊಂಡು ಕತ್ತಿಯಿಂದ ಸುಧಾಳ ಕುತ್ತಿಗೆ ಕಡಿದು ಕೊಲೆ ಮಾಡಿದ್ದನು. ಈ ಸಂಬಂಧ ಬಾಳೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಎ. ಪಾಟೀಲ್, ಆರೋಪ ಸಾಬೀತಾದ ಹಿನ್ನೆಲೆ ಆರೋಪಿ ಚಂದ್ರಯ್ಯನಿಗೆ ಜೀವಾವಧಿ ಶಿಕ್ಷೆ ಹಾಗೂ ರು. 10 ಸಾವಿರ ದಂಡ ವಿಧಿಸಿ ಶುಕ್ರವಾರ ತೀರ್ಪು ನೀಡಿದರು. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ವಿ.ಆರ್. ಉಪಾಧ್ಯೆ ಅವರು ಮೊಕದ್ದಮೆ ನಡೆಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.