ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಮನೆಯಲ್ಲಿ ದಾಸ್ತಾನು ಇಟ್ಟಿದ್ದ ಮದ್ಯ ವಶ

Parashurama
Updated On : 9 Mar 2013, 11:27 am

ಕ.ಪ್ರ.ವಾರ್ತೆ,ಚಿಕ್ಕಮಗಳೂರು, ಮಾ. 8
ಅಬಕಾರಿ ಇಲಾಖೆಯ ಅನುಮತಿ ಪಡೆಯದೆ ಮನೆಯಲ್ಲಿ ದಾಸ್ತಾನು ಇರಿಸಿಕೊಂಡಿದ್ದ ಸುಮಾರು ಒಂದೂವರೆ ಲಕ್ಷ ರುಪಾಯಿ ಮೌಲ್ಯದ ಮದ್ಯವನ್ನು ಅಬಕಾರಿ ಇಲಾಖೆಯವರು ಶುಕ್ರವಾರ ವಶಕ್ಕೆ ತೆಗೆದುಕೊಂಡು ಒಬ್ಬನನ್ನು ಬಂಧಿಸಿದ್ದಾರೆ.
ಒರಿಜಿನಲ್ ಚಾಯ್ಸ್ ವಿಸ್ಕಿಯ ಮದ್ಯದ 70 ಬಾಕ್ಸ್‌ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದು, ಇದರ ಮಾಲೀಕ ಬಿ. ರಾಜಪ್ಪ ಅವರನ್ನು ಬಂಧಿಸಲಾಗಿದೆ.
ಖಚಿತ ಮಾಹಿತಿ: ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಉಪ ಆಯುಕ್ತ ವೆಂಕಟೇಶ್ ಪದಕಿ ಅವರ ಮಾರ್ಗದರ್ಶನದಲ್ಲಿ ಉಪ ಅಧೀಕ್ಷಕ ಮಹಾದೇವ್ ಹಾಗೂ ಸಿಬ್ಬಂದಿ ವಿಜಯಪುರ ಬಡಾವಣೆಯಲ್ಲಿರುವ  ಬಿ. ರಾಜಪ್ಪ ಅವರ ಮನೆಯ ಮೇಲೆ ಶುಕ್ರವಾರ ಮಧ್ಯಾಹ್ನ ದಾಳಿ ನಡೆಸಿದರು. ಆಗ ಮನೆಯ ಕಾರ್ ಶೆಡ್‌ನಲ್ಲಿ 70 ಬಾಕ್ಸ್ ಮದ್ಯ ಪತ್ತೆಯಾಗಿದೆ.
ಈ ಮದ್ಯ ಬಿ. ರಾಜಪ್ಪ ಅವರಿಗೆ ಸೇರಿದ್ದು, ಆದರೆ, ಅದನ್ನು ಮನೆಯಲ್ಲಿ ಇಟ್ಟಿರುವುದು ತಪ್ಪು. ಅಂಗಡಿಯನ್ನು ಹೊರತುಪಡಿಸಿ ಬೇರೆ ಕಡೆಯಲ್ಲಿ ದಾಸ್ತಾನು ಮಾಡಬೇಕಾದರೆ ಅಬಕಾರಿ ಇಲಾಖೆ ಅನುಮತಿ ಪಡೆಯಬೇಕು. ಆದರೆ, ಅನುಮತಿ ಪಡೆಯದೆ ಮದ್ಯವನ್ನು ದಾಸ್ತಾನು ಮಾಡಿರುವುದು ತಪ್ಪೆಂದು ಪರಿಗಣಿಸಿ ಮದ್ಯವನ್ನು ವಶ ಪಡೆಸಿಕೊಳ್ಳಲಾಗಿದೆ.
ತಮ್ಮ ಹೆಸರಿನಲ್ಲಿ ಎರಡು ವೈನ್ಸ್ ಸ್ಟೋರ್‌ಗಳಿದ್ದು, ಅಲ್ಲಿ ಮಾರಾಟ ಮಾಡಲು ಮದ್ಯವನ್ನು ಖರೀದಿ ಮಾಡಲಾಗಿದೆ. ಅಂಗಡಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಮನೆಯಲ್ಲಿ ದಾಸ್ತಾನು ಮಾಡಲಾಗಿತ್ತು ಎಂದು ರಾಜಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡುವಾಗ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments