ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಮಹಿಳೆಯರಿಗೆ ಗೌರವ ಸ್ಥಾನ ನೀಡಿ

Parashurama
Updated On : 9 Mar 2013, 11:26 am

ಕ.ಪ್ರ.ವಾರ್ತೆ, ತರೀಕೆರೆ, ಮಾ.8
ಮಹಿಳೆಯರ ಬಗ್ಗೆ ಗೌರವ ಮೂಡಿಸಲು ಮನೆಯಿಂದಲೇ ಅರಿವು ಮೂಡಿಸಬೇಕು ಎಂದು ತರೀಕೆರೆ ಹಿರಿಯ ಸಿವಿಲ್ ನ್ಯಾಯಾಧೀಶ ಹಿದಾಯತ್ ಉಲ್ಲಾ ಷರೀಫ್ ತಿಳಿಸಿದ್ದಾರೆ.
ಅವರು ಶುಕ್ರವಾರ ತಾಲೂಕು ಕಾನೂನು ಪ್ರಾಧಿಕಾರ, ವಕೀಲರ ಸಂಘದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಮಹಿಳೆಯರಿಗೆ ಕಾನೂನು ಅರಿವು- ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಋಣ ತೀರಿಸಲು ಸಾಧ್ಯವಿಲ್ಲ: ಮಕ್ಕಳಿಗೆ ಸರಿಯಾದ ಸಂಸ್ಕಾರ ನೀಡುವುದರೊಂದಿಗೆ ಮನೆಯಲ್ಲಿಯೇ ನೈತಿಕ ಶಿಕ್ಷಣ ಹೇಳಿಕೊಡಬೇಕು. ಮಹಿಳೆಯರಿಗೆ ಎಲ್ಲ ಧರ್ಮಗಳಲ್ಲೂ ಪವಿತ್ರವಾದ ಸ್ಥಾನವಿದೆ, ಪುರುಷರ ಜೀವನ ಮಹಿಳೆಯಿಂದಲೇ ಹಸಿರಾಗುತ್ತದೆ. ಪ್ರತಿ ಪುರುಷರು ಮಹಿಳೆಯರನ್ನು ಗೌರವಾನ್ವಿತವಾಗಿ ನಡೆಸಿಕೊಳ್ಳಬೇಕು ಎಂದವರು ಹೇಳಿದರು.
ತರೀಕೆರೆ ಕಿರಿಯ ಸಿವಿಲ್ ನ್ಯಾಯಾಧೀಶ ಪ್ರಭು ಎನ್. ಬಡಿಗೇರ್ ಮಾತನಾಡಿ, ವೇದ ಕಾಲದಿಂದಲೂ ಮಹಿಳೆಯರಿಗೆ ಗೌರವ ಇದೆ. ಹೆಣ್ಣಿನ ಮೇಲೆ ಶೋಷಣೆ ನಡೆಯುತ್ತಿದ್ದು, ಹೆಣ್ಣುಮಕ್ಕಳು ಇದನ್ನು ಖಂಡಿಸಬೇಕು, ಧೈರ್ಯವಾಗಿ ಪ್ರತಿಭಟಿಸಬೇಕು ಎಂದು ತಿಳಿಸಿದರು.
ನಾವೇ ಕಲ್ಪಿಸಿಕೊಳ್ಳಬೇಕು: ವಕೀಲರಾದ ಮಮತ ಮಾತನಾಡಿ, ಇಂದು ಮಹಿಳೆ ಎಲ್ಲಾ ಕ್ಷೇತ್ರಗಳಲ್ಲೂ ಮುಂದುವರಿದಿದ್ದಾಳೆ. ಅವಕಾಶಗಳನ್ನು ನಾವೇ ಕಲ್ಪಿಸಿಕೊಳ್ಳಬೇಕು. ಹೆಣ್ಣುಮಕ್ಕಳಿಗೆ ಶಿಕ್ಷಣವೇ ಒಡವೆ ಎಂದರು.
ಸರ್ಕಾರಿ ಅಭಿಯೋಜಕ ಭಾಸ್ಕರ್ ಮಾತನಾಡಿ, ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ಇದೆ. ಕೌಟುಂಬಿಕ ಹಿಂಸೆಗೆ ಒಳಾಗದ ಮಹಿಳೆಗೆ ರಕ್ಷಣೆ ಕೊಡಬೇಕು. ಮಹಿಳೆಯರು ದೂರು ಕೊಡಬಹುದು ಎಂದು ತಿಳಿಸಿದರು.
ವಕೀಲರ ಸಂಘದ ಅಧ್ಯಕ್ಷ ಸಿ.ಎಸ್. ಶಿವಪ್ರಸಾದ್ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಸಂಸ್ಕೃತಿಯಲ್ಲಿ ಮಹಿಳೆಗೆ ಮೊದಲ ಗೌರವ ಇದೆ. ಮಹಿಳೆಯರಿಗೆ ಕಾನೂನಿನ ರಕ್ಷಣೆ ಅಗತ್ಯ ಎಂದು ತಿಳಿಸಿದರು.
ವಕೀಲ ಕೆ.ಆರ್. ರೇವಣಸಿದ್ದಪ್ಪ, ಟಿ.ಕೆ. ನಂದೀಶ್ವರಯ್ಯ, ರೇಷ್ಮಾ, ಜ್ಯೋತಿ ಮಾತನಾಡಿದರು. ವಕೀಲರಾದ ಮಮತ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments