ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಪ್ರಾಥಮಿಕ ಸದಸ್ಯತ್ವದಿಂದ 7 ಕೈ ಕಾರ್ಯಕರ್ತರ ಅಮಾನತು

Parashurama
Updated On : 10 Mar 2013, 11:51 am

ಕ.ಪ್ರ ವಾರ್ತೆ, ಚಿಕ್ಕಮಗಳೂರು, ಮಾ.9
ಚಿಕ್ಕಮಗಳೂರು ನಗರಸಭಾ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಸ್ಪರ್ಧೆ ಮಾಡಿರುವ 7 ಮಂದಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ ಎಂದು ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್ ಉರಾಳ್ ತಿಳಿಸಿದ್ದಾರೆ. ಚಿಕ್ಕಮಗಳೂರು ನಗರದ ವಾರ್ಡ್ 3ರಲ್ಲಿ ಸ್ಪರ್ಧೆ ಮಾಡಿದ್ದ ಎಚ್.ಎಸ್. ಮಲ್ಲೇಶ್, 17ನೇ ವಾರ್ಡ್‌ನಲ್ಲಿ  ರುಕ್ಸಾನಾಬಾನು, 18ನೇ ವಾರ್ಡ್‌ನಲ್ಲಿ ಮಹಮ್ಮದ್ ಪಾಷ, ಜುಭೀದುಲ್ಲಾ ಶರೀಫ್, 19ನೇ ವಾರ್ಡ್‌ನಲ್ಲಿ  ಶ್ರೀನಿವಾಸ್ ದೇವಾಂಗ, 30ನೇ ವಾರ್ಡ್‌ನಲ್ಲಿ ಫರ್ಜನಾ ಮಸೂದ್, 35ನೇ ವಾರ್ಡ್‌ನಲ್ಲಿ ಸ್ಪರ್ಧೆ ಮಾಡಿದ್ದ  ಕೆ.ಬಿ. ಶಶಿಧರ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ರಾಜಿನಾಮೆಗೆ ಆಗ್ರಹ: ಸಿಡಿಎ ಅಧ್ಯಕ್ಷರ ಮನೆಯಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹ ಮಾಡಿರುವುದು ಬಹಿರಂಗಗೊಂಡಿದೆ. ಇದರ ನೈತಿಕ ಹೊಣೆ ಹೊತ್ತು ಸಿಡಿಎ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಈ ಪ್ರಕರಣ ತನಿಖೆಯಾಗಿ ಸತ್ಯಾಸತ್ಯತೆ ಹೊರಬರುವವರೆಗೆ ಅವರು ಆ ಸ್ಥಾನದಲ್ಲಿ ಮುಂದುವರೆಯಬಾರದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್. ಮೂರ್ತಿ ಆಗ್ರಹಿಸಿದರು.
ಚುನಾವಣಾ ಆಯೋಗ ಮತದಾರರಿಗೆ ಇಲ್ಲಸಲ್ಲದ ಕಿರುಕುಳ ನೀಡಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಅದಲು ಬದಲಾಗಿ ಗೊಂದಲ ಉಂಟು ಮಾಡಿದ್ದಾರೆ. ಇದು ಮೇಲ್ನೋಟಕ್ಕೆ ಆಡಳಿತಾರೂಢ ಪಕ್ಷಕ್ಕೆ ಸಹಕಾರ ಮಾಡುವ ಮನೋಭಾವ ಕಂಡು ಬರುತ್ತಿದೆ ಎಂದು ಹೇಳಿದರು.
ಗಡಿಪಾರಿಗೆ ಒತ್ತಾಯ: ಸಿನಿಮೀಯ ರೀತಿಯಲ್ಲಿ ನಗರದಲ್ಲಿ ಶುಕ್ರವಾರ ರಾತ್ರಿ ಗೂಂಡಾಗಿರಿ ನಡೆದಿದೆ. ಅಮಾಯಕರ ಮೇಲೆ ಹಲ್ಲೆ ನಡೆದಿದೆ. ನಗರದಲ್ಲಿ ಭಯದ ವಾತಾವರಣ ಸೃಷ್ಟಿಸುವ ಕೆಲಸ ನಡೆದಿದೆ ಎಂದರು.
ಘಟನೆಯ ಹಿಂದಿರುವ ವ್ಯಕ್ತಿ ಈ ಹಿಂದೆ ಕಾಂಗ್ರೆಸ್‌ನಲ್ಲಿ ನಾಯಕರಾಗಿದ್ದರು. ಈಗ ಜೆಡಿಎಸ್‌ನಲ್ಲಿ ನಾಯಕರಾಗಿದ್ದಾರೆ. ಅವರ ಪ್ರಚೋದನೆಯಿಂದ ಈ ಕೆಲಸ ನಡೆದಿದೆ. ಈ ಹಿಂದೆಯೂ ಕೂಡ ಅವರ ಸಹೋದರ ಲಾಂಗ್ ಝಳಪಿಸಿ ಹಲ್ಲೆ ನಡೆಸಿದ್ದರು. ಇಂತಹವರು ಯಾರೇ ಇದ್ದರೂ ಆ ಪಕ್ಷದಿಂದ ಹೊರ ಹಾಕಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ. ಮಹಮದ್,  ಜೇಮ್ಸ್, ಸುಬ್ರಹ್ಮಣಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments