ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಮಲೆನಾಡು ಮಹಿಳೆಯರು ವಿವಿಧ ಕ್ಷೇತ್ರಗಳಿಗೆ ಪಾದಾರ್ಪಣೆ

Parashurama
Updated On : 10 Mar 2013, 11:50 am

ಕಪ್ರ ವಾರ್ತೆ, ನರಸಿಂಹರಾಜಪುರ
ಕೃಷಿ ಕೆಲಸಗಳಿಗೆ ಸೀಮಿತವಾಗಿದ್ದ ಮಲೆನಾಡಿನ ಮಹಿಳೆಯರು ಇತ್ತೀಚಿನ ವರ್ಷಗಳಲ್ಲಿ ವಿವಿಧ ಕ್ಷೇತ್ರಗಳಿಗೆ ಪಾದಾರ್ಪಣೆ ಮಾಡಿ ಸಾಧನೆ ಮಾಡುತ್ತಿದ್ದಾರೆ ಎಂದು ಕಿರುತೆರೆ ಹಾಗೂ ರಂಗಭೂಮಿ ಕಲಾವಿದೆ ಸಿ.ಕೆ.  ಅಂಜಲಿಶೆಟ್ಟಿ ತಿಳಿಸಿದರು.  
ಅವರು ಶುಕ್ರವಾರ ಕೃಷಿ ಭವನದಲ್ಲಿ ನಡೆದ ಶಾಶ್ವತಿ ಮಹಿಳಾ ಒಕ್ಕಲಿಗರ ಸಂಘದ 16ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ದೂರದರ್ಶನದಿಂದ ಭಾರತೀಯ ಕಲೆ, ಸಂಸ್ಕೃತಿ ನಾಶವಾಗುತ್ತಿದೆ. ಮಕ್ಕಳನ್ನು ಕೇವಲ ಎಂಜಿನಿಯರ್, ಡಾಕ್ಟರನ್ನಾಗಿ ಮಾತ್ರ ಮಾಡದೆ   ಕಲೆ, ಸಾಹಿತ್ಯ ಕ್ಷೇತ್ರಗಳ ಪರಿಚಯ ಮಾಡಿಕೊಡಬೇಕು. ಕಲೆಯಿಂದ ಜೀವನದಲ್ಲಿ ತೃಪ್ತಿ ಸಿಗಲಿದೆ ಎಂದರು.
ಇಂದಿನ ಯುವ ಜನರಿಗೆ ಎಲ್ಲಾ ಕ್ಷೇತ್ರದಲ್ಲೂ ಹೇರಳ ಅವಕಾಶವಿದೆ. ಅದನ್ನು ಸರಿಯಾದ ರೀತಿಯಲ್ಲಿ  ಬಳಸಿಕೊಳ್ಳಬೇಕು. ತಂದೆ, ತಾಯಂದಿರು ಮಕ್ಕಳಿಗೆ ನೈತಿಕ ಶಿಕ್ಷಣ ಕೊಡಬೇಕು. ಸಮಾಜದಲ್ಲಿ ಹೇಗೆ ಬದಕುಬೇಕು ಎಂಬುದನ್ನು ಮನೆಯಿಂದಲೇ ಹೇಳಿಕೊಡಬೇಕು. ಮಹಿಳೆಯರ ಮೇಲೆ ದೌರ್ಜನ್ಯ ನಡೆದಾಗ ಎಲ್ಲಾ ಮಹಿಳೆಯರು ಒಟ್ಟಾಗಿ ಪ್ರತಿಭಟಿಸಬೇಕು ಎಂದರು.
ಪುಸ್ತಕ ಬಿಡುಗಡೆ: ತಾಲೂಕು ಶಾಶ್ವತಿ ಮಹಿಳಾ ಒಕ್ಕಲಿಗರ ಸಂಘದ ಅಧ್ಯಕ್ಷೆ ಮೀನಾಕ್ಷಿ ಕಾಂತರಾಜ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ದ್ವಾರಮಕ್ಕಿಯ ಕೃಷಿಕರಾದ ಶ್ರೀಮತಿ ಸುಶೀಲಮ್ಮ ಸಮಾರಂಭ ಉದ್ಘಾಟಿಸಿ, ಮಲೆಗಳಲ್ಲಿ ಒಕ್ಕಲಿಗ ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದರು.
ವೇದಿಕೆಯಲ್ಲಿ ಸಂಘದ ಕಾರ್ಯದರ್ಶಿ ಅಂಬಿಕಾ ರವಿಚಂದ್ರ, ಖಜಾಂಚಿ ಶರಾವತಿ ಉಪಸ್ಥಿತರಿದ್ದರು. ಒಕ್ಕಲಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಾದ ಮಯೂರಿ, ಜಿ.ಆರ್. ಅನುಕ್ತಾ, ವೇದಾಂತ ಪೃಥ್ವಿ, ಸಮರ್ಥ ಹಾಗೂ ಭಾಗ್ಯಶ್ರೀ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕೃಷಿ ಸಾಧನೆಗಾಗಿ ರಾಜ್ಯಪಾಲರಿಂದ ಪುರಸ್ಕಾರ ಪಡೆದ ಶ್ರೀಮತಿ ಉಮಾ ಸತ್ಯನಾರಾಯಣ ಅವರನ್ನು  ಗೌರವಿಸಲಾಯಿತು. ವಾರ್ಷಿಕೋತ್ಸವದ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಸಂಘದ ಸದಸ್ಯರಿಗೆ ಬಹುಮಾನ ವಿತರಿಸಲಾಯಿತು.    ಶಾಶ್ವತಿ ಮಹಿಳಾ ಒಕ್ಕಲಿಗರ ಸಂಘದ ಕಾರ್ಯದರ್ಶಿ ಅಂಬಿಕಾ ವರದಿ ವಾಚಿಸಿದರು. ರೂಪ ಮತ್ತು ಸಂಗಡಿಗರು ಪ್ರಾರ್ಥಿಸಿದರು. ತೃಪ್ತಿ ಸ್ವಾಗತಿಸಿ, ಶ್ಯಾಮಲಾ ಸತೀಶ್, ಭಾರತಿಬಾಲು ಕಾರ್ಯಕ್ರಮ ನಿರೂಪಿಸಿದರು. ಭಾರತಿಚಂದ್ರು ವಂದಿಸಿದರು. ನಂತರ ಸಂಘದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments