'ಮಹಿಳೆಯರು ಸ್ವಾವಲಂಬಿಯಾಗಲಿ'
ಕಪ್ರ ವಾರ್ತೆ, ಚಿಕ್ಕಮಗಳೂರು
ನಗರದ ಐಡಿಎಸ್ಜಿ ಸರ್ಕಾರಿ ಕಾಲೇಜು ಯುವ ರೆಡ್ಕ್ರಾಸ್ ಘಟಕದಿಂದ ಅಂತರರಾಷ್ಟ್ರೀಯ ಮಹಿಳಾದಿನವನ್ನು ಬೆಂಕಿ ರಹಿತ ಅಡುಗೆ ಸ್ಪರ್ಧೆ ನಡೆಸುವ ಮೂಲಕ ವಿಭಿನ್ನವಾಗಿ ಆಚರಿಸಲಾಯಿತು.
ಸ್ಪರ್ಧೆಯಲ್ಲಿ 66 ವಿದ್ಯಾರ್ಥಿಗಳು ಪಾಲ್ಗೊಂಡು ವಿಭಿನ್ನವಾದ ತಿನಿಸುಗಳನ್ನು ತಯಾರಿಸಿ ಉತ್ಸಹದಿಂದ ಪಾಲ್ಗೊಂಡಿದ್ದರು.
ಸ್ವಾವಲಂಬಿಗಳಾಗಿ: ಸಂಜೆ ನಡೆದ ಮಹಿಳಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಬಿ.ಎಚ್. ನರೇಂದ್ರ ಪೈ, ಮಹಿಳೆಯಲ್ಲಿ ಸ್ಪರ್ಧಾತ್ಮಕ ಮನೋಭಾವ ಮೂಡಿಸುವ ನಿಟ್ಟಿನಲ್ಲಿ ಈ ಸ್ಪರ್ಧೆ ಯಶಸ್ವಿಯಾಗಿದೆ. ಯುವತಿಯರು ಸ್ವಾಭಿಮಾನದಿಂದ ಸ್ವಾವಲಂಬಿಗಳಾಗಿ ಬದುಕನ್ನು ಕಟ್ಟಿಕೊಳ್ಳಲು ಪ್ರಯತ್ನಿಸಬೇಕೆಂದರು.
ಯುವ ರೆಡ್ಕ್ರಾಸ್ ಘಟಕದ ಸಭಾಪತಿಯಾದ ಪ್ರಾಂಶುಪಾಲೆ ಪ್ರೊ. ಜರೀನಾ ಕೌಸರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳೆಯರ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ಸಾಧನೆಗಳ ಆತ್ಮಾವಲೋಕನಕ್ಕೆ ಮಹಿಳಾ ದಿನಾಚರಣೆ ಕಾರಣೀಭೂತವಾಗಬೇಕು ಎಂದರು.
ಕಾನೂನು ಬಲಗೊಳ್ಳಲಿ: ಮಹಿಳೆ ಇಂದು ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ತನ್ನದೇ ಆದ ಕೊಡುಗೆಗಳ ಮೂಲಕ ಗುರುತಿಸಿಕೊಂಡಿದ್ದಾಳೆ. ಆದರೆ, ಸಮಾಜದಲ್ಲಿ ಮಹಿಳೆಯರು ದೌರ್ಜನ್ಯ ಹಾಗೂ ಶೋಷಣೆಯಿಂದ ಇನ್ನೂ ಮುಕ್ತವಾಗಿಲ್ಲ. ಮಹಿಳಾ ರಕ್ಷಣೆಯ ಕಾನೂನುಗಳು ಮತ್ತಷ್ಟು ಬಲಿಷ್ಠವಾಗಬೇಕೆಂದರು.
ಭಾರತೀಯ ರೆಡ್ಕ್ರಾಸ್ ಸಂಸ್ಥೆ ಚಿಕ್ಕಮಗಳೂರು ಶಾಖೆಯ ಸಭಾಪತಿ ಡಾ. ಸುಂದರ್ಗೌಡ, ಡಾ. ಕೆ.ಸಿ. ಜಗದೀಶ್, ಡಾ. ಪ್ರತಿಮಾ ಮಥಾಯಸ್ ಮತ್ತು ಅರ್ಪಿತಾ ಪಾಲ್ಗೊಂಡಿದ್ದರು. ತೀರ್ಪುಗಾರರಾದ ಉಷಾ ಬಸವರಾಜ್, ರೇಖಾ ಸುಧಾಮ, ಚಂದ್ರಕಲಾ ಬಹುಮಾನ ವಿತರಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.