ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಶಿಕ್ಷಣ ವ್ಯಾಪಾರಿಕರಣವಾಗುತ್ತಿದೆ

Parashurama
Updated On : 10 Mar 2013, 11:51 am

ಕೊಪ್ಪ: ಇಂದಿನ ದಿನಗಳಲ್ಲಿ ಶಿಕ್ಷಣ ವ್ಯವಸ್ಥೆ ವ್ಯಪಾರಿಕರಾಣವಾಗುತ್ತಿದೆ. ಖಾಸಗಿ ಆಂಗ್ಲಮಾಧ್ಯಮ ಶಾಲೆಗಳತ್ತ ಪೋಷಕರು ಆಕರ್ಷಿತರಾಗುತ್ತಿರುವುದರಿಂದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಪ್ರಮಾಣ ಗಣನೀಯವಾಗಿ ಇಳಿಕೆಯಾಗುದೆ. ಸರ್ಕಾರಿ ಶಾಲೆಗಳ ಉಳುವಿಗೆ ಸರ್ಕಾರ ವಿನೂತನ ಶಿಕ್ಷಣ ಯೋಜನೆ ಜಾರಿಗೆ ತರಲು ಮುಂದಾಗಿದೆ ಎಂದು ವಿಧಾನ ಸಭಾಧ್ಯಕ್ಷ ಕೆ.ಜಿ. ಬೋಪಯ್ಯ ತಿಳಿಸಿದರು.
 ಶನಿವಾರ ಬೆಂಗಳೂರಿನ ಭಾರತಿ ಪ್ರತಿಷ್ಠಾನ ಚಾರಿಟಬಲ್ ಟ್ರಸ್ಟ್‌ನಿಂದ ದಿವಂಗತ ನಾಗರತ್ನಮ್ಮ, ಎಚ್.ಎಸ್. ಸೀತಾರಾಮಯ್ಯನವರ ನೆನಪಿನಲ್ಲಿ ಶಾಲೆಗಾಗಿ ನಾವು-ನೀವು ಯೋಜನೆಯಡಿ ತಾಲೂಕಿನ ಭಂಡಿಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗಾಗಿ ನೂತನವಾಗಿ ನಿರ್ಮಿಸಿರುವ ವಿದ್ಯಾನಂದ ಗ್ರಂಥಾಲಯದ ಉದ್ಘಾಟನೆ ಮಾಡಿ ಮಾತನಾಡಿ, ಜನರ ಮನಸ್ಸಿನಲ್ಲಿ ಸರ್ಕಾರಿ ಶಾಲೆಗಳ ಬಗ್ಗೆ ಕೀಳಿರಿಮೆ ಭಾವನೆ ಉಲ್ಬಣಿಸಿದೆ ಎಂದರು.
 ನಿವೃತ್ತ ಮುಖ್ಯ ಶಿಕ್ಷಕ ಕೆ. ವೆಂಕಟೇಶಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿಂದೂ ಸೇವಾ ಪ್ರತಿಷ್ಠಾನದ ವಿಶ್ವಸ್ಥ ವಿ. ವೆಂಕಟೇಶ ಮೂರ್ತಿ, ಭಾರತಿ ಪ್ರತಿಷ್ಠಾನದ ವಿಶ್ವಸ್ಥ ಎಚ್.ಎಸ್. ಶ್ರೀನಿವಾಸಮೂರ್ತಿ, ಹಿಂದೂ ಜಾಗರಣ ವೇದಿಕೆ ರಾಜ್ಯ ಸಂಚಾಲಕ ಜಗದೀಶ್ ಕಾರಂತ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments