ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ತರೀಕೆರೆಯಲ್ಲಿ ಕಾಂಗ್ರೆಸ್ ವಿಜಯೋತ್ಸವ

Parashurama
Updated On : 12 Mar 2013, 10:14 am

ಕ.ಪ್ರ ವಾರ್ತೆ, ತರೀಕೆರೆ, ಮಾ.11
ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಸೋಮವಾರ ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಪುರಸಭೆ ಸದಸ್ಯರ ಚುನಾವಣೆಯಲ್ಲಿ ಪಕ್ಷ ಅತ್ಯಧಿಕ ಸ್ಥಾನಗಳನ್ನು ಗಳಿಸಿದ್ದಕ್ಕಾಗಿ ಸಂಭ್ರಮದ ವಿಜಯೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಮಾಜಿ ಶಾಸಕ ಬಿ.ಆರ್. ನೀಲಕಂಠಪ್ಪ ಅವರು ವಿಜೇತ ಅಭ್ಯರ್ಥಿಗಳನ್ನು ಅಭಿನಂದಿಸಿ ಮಾತನಾಡಿ, ಕೇಂದ್ರ ಸರ್ಕಾರದ ಅಡಳಿತ ಜನಪರವಾಗಿದೆ, ಬಿಜೆಪಿ ಭ್ರಷ್ಟಾಚಾರವನ್ನು ಕಾಂಗ್ರೆಸ್ ನಾಯಕರು ಎಳೆ ಎಳೆಯಾಗಿ  ಬಿಡಿಸಿಟ್ಟಿದ್ದಾರೆ. ಪುರಸಭೆಯಿಂದ ಎಲ್ಲ ಕಾಮಗಾರಿಗಳನ್ನು ಸಂಪೂರ್ಣವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
ಮಾಜಿ ಶಾಸಕ ಎಸ್.ಎಂ. ನಾಗರಾಜ್ ಮಾತನಾಡಿ, ಆಯ್ಕೆಯಾಗಿರುವ ಪಕ್ಷದ ಎಲ್ಲ ಅಭ್ಯರ್ಥಿಗಳು ಉತ್ತಮ ಕಾರ್ಯನಿರ್ವಹಿಸಿ ಮತದಾರರ ಮನಸ್ಸನ್ನು ಗೆಲ್ಲಬೇಕು, ಪಕ್ಷದ ಆದೇಶಕ್ಕೆ ಅನುಗುಣವಾಗಿ ಕಾರ್ಯಗಳನ್ನು ನಿರ್ವಹಿಸಬೇಕು ಎಂದು ತಿಳಿಸಿದರು.
ಮಾಜಿ ಶಾಸಕ ಟಿ.ಎಚ್. ಶಿವಶಂಕರಪ್ಪ ಮಾತನಾಡಿ, ಪಟ್ಟಣದ ಅಭಿವೃದ್ಧಿಯೇ ಮುಖ್ಯ ಗುರಿಯಾಗಿರಲಿ ಎಂದು ತಿಳಿಸಿದರು.
ತರಬೇತಿ ಅಗತ್ಯ: ಕೆಪಿಸಿಸಿ ಸದಸ್ಯ ಟಿ.ವಿ. ಶಿವಶಂಕರಪ್ಪ ಅವರು ಪಕ್ಷದ ಪುರಸಭಾ ಸದಸ್ಯರನ್ನು ಅಬಿನಂದಿಸಿ ಮಾತನಾಡಿ, ಪಕ್ಷದಿಂದ ವಿಜೇತ ಅಭ್ಯರ್ಥಿಗಳಿಗೆ ಪುರಸಭೆ ಅಡಳಿತ ಕುರಿತು ತರಬೇತಿ ನೀಡಬೇಕು ಎಂದು ತಿಳಿಸಿದರು.  
ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಜಿ.ಎಚ್. ಶ್ರೀನಿವಾಸ್ ಮಾತನಾಡಿ, ಪಕ್ಷದ ಪರವಾಗಿರುವ ಈ ಫಲಿತಾಂಶ ಮುಂದೆ ನಡೆಯಲಿರುವ ವಿಧಾನಸಭಾ ಚುನಾವಣೆಯ ದಿಕ್ಸೂಚಿಯಾಗಿದೆ. ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಬಹುಮತ ಗಳಿಸುತ್ತದೆ ಎಂದು ತಿಳಿಸಿದರು.  
ಅಜ್ಜಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಆರ್. ದೃವಕುಮಾರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ  ಸಮೀವುಲ್ಲಾ, ಜಿಪಂ ಸದಸ್ಯ ಕೆ.ಪಿ. ಕುಮಾರ್, ಮುಖಂಡರಾದ ಎಚ್. ಓಂಕಾರಪ್ಪ, ದೋರನಾಳು ಪರಮೇಶ್,  ವಿಜೇತ ಪುರಸಭಾ ಸದಸ್ಯ ಟಿ.ಎಸ್. ರಮೇಶ್, ಕಾರ್ಯದರ್ಶಿ ಪರುಶುರಾಮ್, ಡಾ. ಮರುಳಸಿದ್ದಪ್ಪ,      ಟಿ.ಆರ್. ಬಸವರಜ್, ಹೇಮಲತಾ ರೇವಣ್ಣ ಮತ್ತಿತರರು ಮಾತನಾಡಿದರು.
ಬಿ.ಎಸ್.ಆರ್. ಮಂಜುನಾಥ್, ಸಮಿತಿ ಕಾರ್ಯದರ್ಶಿ ಪರಶುರಾಮ್, ಎಸ್.ಎನ್. ಲೋಹಿತ್, ವಿಜೇತ   ಪುರಸಭಾ ಸದಸ್ಯರು ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments