ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಶಾಲೆಗಳಲ್ಲಿ ಸಮಾನತೆ ಇರಲಿ

Srinivasa Murthy VN
Updated On : 13 Mar 2013, 10:18 am

ನರಸಿಂಹರಾಜಪುರ: ನಾಗರಮಕ್ಕಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿಯ ಮಕ್ಕಳಿಗೆ ಬೀಳ್ಕೊಡುಗೆ ಹಾಗೂ  ಶಾಲೆಯ ಎಲ್ಲಾ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್‌ಗಳ ವಿತರಣಾ ಕಾರ್ಯಕ್ರಮ ನಡೆಯಿತು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಮಹೇಶ್ ಮಾತನಾಡಿ, ಸರ್ಕಾರಿ  ಶಾಲೆಗಳಲ್ಲಿ ಸಮಾನತೆ, ಗುಣಮಟ್ಟದ ಶಿಕ್ಷಣ, ಹಾಜರಾತಿ ಹಾಗೂ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿದೆ ಎಂದರು.
ಸಭೆಯಲ್ಲಿ ಉಪಸ್ಥಿತರಿದ್ದ ಸಂಕದಕುಣಿ ಕ್ಲಸ್ಟರ್‌ನ ಸಿಆರ್‌ಪಿ ಸುಕೇಶ್ ಇಲಾಖೆಯಿಂದ ಸರ್ಕಾರಿ ಶಾಲೆಗಳಿಗೆ  ಸಿಗುವ ಸೌಲಭ್ಯಗಳ ಬಗ್ಗೆ ವಿವರಿಸಿದರು.
ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಅಶ್ವತ್ಥ್ ನಾರಾಯಣ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸೀತೂರು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸುನಂದಾ, ಉಪಾಧ್ಯಕ್ಷ ಬಾಬು ಪೂಜಾರಿ, ಸದಸ್ಯ ಎನ್.ಪಿ. ರಮೇಶ್, ಗ್ರಾಮಸ್ಥರಾದ ಕುಂಟೇಹಡಲು ಗಣಪತಿ ಉಪಸ್ಥಿತರಿದ್ದರು. ಗ್ರಾಮ ಪಂಚಾಯ್ತಿಯವರು ಉಚಿತವಾಗಿ ನೀಡಿದ ಶಾಲಾ ಬ್ಯಾಗ್‌ಗಳನ್ನು ಅತಿಥಿಗಳು ಶಾಲೆಯ ಎಲ್ಲಾ ಮಕ್ಕಳಿಗೆ ವಿತರಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರತಿ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಸಹ ಶಿಕ್ಷಕ ಬಸಪ್ಪ ಸ್ವಾಗತಿಸಿದರು.

ಉಚಿತ ಆರೋಗ್ಯ ತಪಾಸಣಾ ಶಿಬಿರ
ಶೃಂಗೇರಿ: ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಸ್ಥಳೀಯ ರೋಟರಿ ಸಮುದಾಯ ದಳ, ಇನ್ನರ್ ವ್ಹೀಲ್ ಕ್ಲಬ್, ಪ್ರಾಥಮಿಕ ಆರೋಗ್ಯ ಕೇಂದ್ರ ಕರಣಾ ಟ್ರಸ್ಟ್ ಬೇಗಾರು ಮತ್ತು ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ನಡೆಯಿತು. ಶಿಬಿರದಲ್ಲಿ ಪಾಲ್ಗೊಂಡ ಶಿಬಿರಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣೆ, ಔಷಧಿ ವಿತರಿಸಲಾಯಿತು. ಅವಿನಾಶ್, ಪ್ರೊ. ಕೆ. ಪುಟ್ಟಯ್ಯ, ಪೂರ್ಣಿಮಾ ಸಿದ್ದಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement