ದ್ವಿತೀಯ ಪಿಯು ಪರೀಕ್ಷೆ ಆರಂಭ
ಕ.ಪ್ರ ವಾರ್ತೆ, ನರಸಿಂಹರಾಜಪುರ, ಮಾ.13
ತಾಲೂಕಿನಲ್ಲಿ ಎರಡು ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬುಧವಾರದಿಂದ ಪ್ರಾರಂಭಗೊಂಡಿದೆ.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಬಾಳೆಹೊನ್ನೂರಿನ ಎಸ್ಜೆಆರ್ ಪದವಿಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರ ಪ್ರಾರಂಭಿಸಲಾಗಿದೆ. ಬುಧವಾರ ನಡೆದ ಇತಿಹಾಸ ವಿಷಯಕ್ಕೆ 302 ವಿದ್ಯಾರ್ಥಿಗಳು ಹಾಜರಿದ್ದರು, 13 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
ಬಾಳೆಹೊನ್ನೂರಿನ ಎಸ್ಜೆಆರ್ ಪರೀಕ್ಷಾ ಕೇಂದ್ರದಲ್ಲಿ 257 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದರು. ಈ ಪೈಕಿ 8 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ತಿಳಿಸಿದ್ದಾರೆ. ಈ ಎರಡೂ ವಿಭಾಗದಲ್ಲಿ ಯಾವುದೇ ಕಾಪಿ ಪ್ರಕರಣಗಳು ಕಂಡುಬಂದಿಲ್ಲ.