ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಪಡಿತರ ಚೀಟಿದಾರರಿಗೆ ಧಾನ್ಯ

Lingaraj Badiger
Updated On : 14 Mar 2013, 10:49 am

ಕ.ಪ್ರ ವಾರ್ತೆ, ಚಿಕ್ಕಮಗಳೂರು, ಮಾ. 13
ಮಾರ್ಚ್ ಮಾಹೆಗೆ ಜಿಲ್ಲೆಯ ಪಟ್ಟಣ ಪ್ರದೇಶದ ಎಎವೈ ಪಡಿತರ ಚೀಟಿದಾರರಿಗೆ 29 ಕೆ.ಜಿ. ಅಕ್ಕಿ, 6 ಕೆ.ಜಿ. ಗೋಧಿ, ಬಿಪಿಎಲ್ ಪಡಿತರ ಚೀಟಿದಾರರಿಗೆ 4 ರಿಂದ 20 ಕೆ.ಜಿ. ಅಕ್ಕಿ, 1 ರಿಂದ 3 ಕೆ.ಜಿ. ಗೋಧಿ, ಮತ್ತು ಎಪಿಎಲ್ ಪಡಿತರ ಚೀಟಿದಾರರಿಗೆ 6 ಕೆ.ಜಿ. ಅಕ್ಕಿ, 3 ಕೆ.ಜಿ. ಗೋಧಿ, ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಹಾಗೂ ಗೃಹ ರಕ್ಷಕ ಸಿಬ್ಬಂದಿಗಳಿಗೆ 15 ಕೆ.ಜಿ. ಅಕ್ಕಿ ಹಾಗೂ 3 ಕೆ.ಜಿ. ಗೋಧಿ ಬಿಡುಗಡೆ ಮಾಡಲಾಗಿದೆ.    
ಮಾರ್ಚ್ ಮಾಹೆಯ ಜಿಲ್ಲೆಯ ಗ್ಯಾಸ್ ರಹಿತ ಪಡಿತರ ಚೀಟಿ ಹೊಂದಿದ ಪಟ್ಟಣ ಪ್ರದೇಶದವರಿಗೆ 5 ಲೀಟರ್ ಮತ್ತು ಅನೌಪಚಾರಿಕ ಪಡಿತರ ಪ್ರದೇಶದವರಿಗೆ 6 ಲೀಟರ್ ಹಾಗೂ ಗ್ರಾಮಾಂತರ ಪ್ರದೇಶದವರಿಗೆ 3 ಲೀಟರ್‌ನಂತೆ ಸೀಮೆಎಣ್ಣೆ ಬಿಡುಗಡೆ ಮಾಡಲಾಗಿದೆ.
ಸಾರ್ವಜನಿಕರು ಸಂಬಂಧಪಟ್ಟ  ನ್ಯಾಯಬೆಲೆ ಅಂಗಡಿಯಿಂದ ತಿಂಗಳ ಒಳಗೆ ಪಡೆಯಬಹುದಾಗಿದೆ ಎಂದು  ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement