ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ವಿಧಾನಸೌಧ ಕನಸು ಕಾಣುತ್ತಿರುವ ಕೆಜೆಪಿ ನಾಯಕರು

Lingaraj Badiger
Updated On : 14 Mar 2013, 10:43 am

ಶಿವಮೊಗ್ಗ: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ರಾಜ್ಯದ ಕೆಲವು ಕಡೆ ಕೆಜೆಪಿ ಖಾತೆ ತೆರೆಯಲು ಸಮರ್ಥವಾಗಿಲ್ಲ. ಹೀಗಿರುವಾಗಲೇ ಆ ಪಕ್ಷದ ನಾಯಕರು ವಿಧಾನಸೌಧದ ಮೂರನೇ ಮಹಡಿ ಹತ್ತುವ ಕನಸು ಕಾಣುತ್ತಿದ್ದಾರೆ ಎಂದು ಡಿಸಿಎಂ ಕೆ.ಎಸ್. ಈಶ್ವರಪ್ಪನವರು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರನ್ನು ಕೆಣಕಿದ್ದಾರೆ.
ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಎರಡು ದಿನ ತರುವಾಯ ಪ್ರತಿಕ್ರಿಯೆ ನೀಡಿರುವ ಈಶ್ವರಪ್ಪನವರು, ನಾವು ಪಕ್ಷ ತೊರೆದಿದ್ದಕ್ಕೆ ಬಿಜೆಪಿಗೆ ಈ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳುವ ಕೆಜೆಪಿ ನಾಯಕರಿಗೆ ಈ ಬಾರಿಯ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕೆಜೆಪಿಯ ಶಕ್ತಿ ಏನೆಂಬುದು ಈಗಾಗಲೇ ತಿಳಿದಿರಬಹುದು ಎಂದು ಲೇವಡಿ ಮಾಡಿದರು.
2007ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ 1,140 ಸ್ಥಾನ ಪಡೆದಿತ್ತು. ಜೆಡಿಎಸ್ 1,500 ಹಾಗೂ ಕಾಂಗ್ರೆಸ್ 1,600 ಸ್ಥಾನ ಗಳಿಸಿತ್ತು. ಆದರೆ, 2008ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಗದ್ದುಗೆ ಏರಿತು. ಅದೇ ರೀತಿ ಈ ಬಾರಿಯ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ 2ನೇ ಸ್ಥಾನದಲ್ಲಿದೆ ಎಂದ ಅವರು, ಮೇ ತಿಂಗಳಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುವುದು ನಿಶ್ಚಿತ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement