ಇಂದು ದತ್ತಿ ಉಪನ್ಯಾಸ
ಕ.ಪ್ರ ವಾರ್ತೆ, ಶೃಂಗೇರಿ, ಮಾ.14
ತಾಲೂಕಿನ ಮೆಣಸೆ ಪಂಚಾಯಿತಿ ಮಸಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಕಸಬಾ ಹೋಬಳಿ ಘಟಕದ ವತಿಯಿಂದ ದತ್ತಿ ಉಪನ್ಯಾಸ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಮಾ.15ರಂದು ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ತಾಲೂಕು ವರ್ತಕರ ಸಂಘದ ಉಪಾಧ್ಯಕ್ಷ ಗೋಕುಲದಾಸ್ ನಾಯಕ್ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಭಾವಗೀತಿ ಮತ್ತು ಜಾನಪದ ಗೀತೆ ಸ್ಪರ್ಧೆ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್.ಎಸ್. ಶಿವಸ್ವಾಮಿ ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕುವೆಂಪು ಶ್ರೀ ರಾಮಾಯಣ ದರ್ಶನಂ ಕುರಿತು ಸುಧೀರ್ ಕುಮಾರ್ ಮರೋಳಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಅಂಗುರುಡಿ ದಿನೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.