ಜಿಲ್ಲಾ ನ್ಯಾಯಾಲಯಕ್ಕೆ ನಟಿ ಪೂಜಾ ಗಾಂಧಿ
ಕ.ಪ್ರ ವಾರ್ತೆ, ಚಿಕ್ಕಮಗಳೂರು, ಮಾ. 15
ಕಳೆದ 2004ರಲ್ಲಿ ನಡೆದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪದ ಮೇಲೆ ದಾಖಲಾಗಿದ್ದ ಕೇಸಿನ ಸಂಬಂಧ ಚಲನಚಿತ್ರ ನಟಿ ಪೂಜಾ ಗಾಂಧಿ ಶುಕ್ರವಾರ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದರು.
2004ರ ಸೆ.3ರಂದು ಪೂಜಾಗಾಂಧಿ ಅವರು ಚಿಕ್ಕಮಗಳೂರು ನಗರಕ್ಕೆ ಜೆಡಿಎಸ್ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದರು. ಆ ವೇಳೆಯಲ್ಲಿ ಅವರು ಪ್ರವಾಸಿ ಮಂದಿರದಲ್ಲಿ ದೃಶ್ಯ ಮಾಧ್ಯಮದೊಂದಿಗೆ ಮಾತನಾಡಿದ ಸಂಬಂಧ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿತ್ತು. ಕೋರ್ಟ್‌ನಿಂದ ಸಮನ್ಸ್ ಜಾರಿಯಾಗಿದ್ದರಿಂದ ಅವರು ಖುದ್ದಾಗಿ ಶುಕ್ರವಾರ ಕೋರ್ಟ್‌ಗೆ ಹಾಜರಾಗಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಆ ಸ್ಥಳದಲ್ಲಿ ನೀತಿ ಸಂಹಿತೆ ಜಾರಿಯಾಗಿರುವುದು ಗೊತ್ತಿರಲಿಲ್ಲ. ಈ ಸಂಬಂಧ ದಾಖಲಾಗಿದ್ದ ಪ್ರಕರಣದ ಅನ್ವಯ ನ್ಯಾಯಾಲಯಕ್ಕೆ ಹಾಜರಾಗಿದ್ದೇನೆ ಎಂದು ಹೇಳಿದರು.
--