21ಕ್ಕೆ ಜಿಲ್ಲೆಗೆ ಸಿಎಂ
ಚಿಕ್ಕಮಗಳೂರು: ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಮಾ. 21 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಎನ್. ಜೀವರಾಜ್ ತಿಳಿಸಿದ್ದಾರೆ.
ಅಂದು ಕೊಪ್ಪಕ್ಕೆ ಆಗಮಿಸಲಿರುವ ಮುಖ್ಯಮಂತ್ರಿಗಳು, ರಾಜ್ಯ ಸರಕಾರವು ಜಾರಿಗೆ ತಂದಿರುವ ಬಿ.ಪಿ.ಎಲ್. ಕುಟುಂಬಗಳಿಗೆ 2 ರು.ಗೆ 1 ಕೆ.ಜಿ. ಅಕ್ಕಿ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಇದಲ್ಲದೆ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೂ ಅಂದು ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಲೋಕಾಯುಕ್ತ ಪೊಲೀಸರ ಭೇಟಿ
ಚಿಕ್ಕಮಗಳೂರು: ಲೋಕಾಯುಕ್ತ ಪೊಲೀಸ್ ನಿರೀಕ್ಷಕರು ಸೋಮವಾರ ಜಿಲ್ಲೆಯ ವಿವಿಧೆಡೆ ಭೇಟಿ ನೀಡಲಿದ್ದಾರೆ. ಬೆ.10.30ಕ್ಕೆ ತರೀಕೆರೆ ಪ್ರವಾಸಿ ಮಂದಿರ ಹಾಗೂ .ಕಡೂರು ಪ್ರವಾಸಿ ಮಂದಿರಕ್ಕೆ ಆಗಮಿಸಲಿದ್ದಾರೆ. ಸಾರ್ವಜನಿಕರು ಅರ್ಜಿ, ದೂರು ಸಲ್ಲಿಸಬಹುದು.