ಜಿಲ್ಲಾ ಯುವ ಪ್ರಶಸ್ತಿಗೆ ಅರ್ಜಿ ಆಹ್ವಾನ: 25ರಂದು ಕೊನೆ ದಿನ
ಚಿಕ್ಕಮಗಳೂರು: ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕ್ರೀಡೆ, ಸಂಸ್ಕೃತಿ ಹಾಗೂ ಸಮುದಾಯ ಅಭಿವೃದ್ಧಿ ಕ್ಷೇತ್ರಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿರುವ 5 ಮಂದಿ ಯುವಕ, ಯುವತಿಯರಿಗೆ ಹಾಗೂ ನೋಂದಾಯಿತ ಯುವಕ ಸಂಘ ಮತ್ತು ಯುವತಿ ಮಂಡಳಿಗೆ ಜಿಲ್ಲಾ ಯುವ ಪ್ರಶಸ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾ. 25 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.