ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಕುಡಿಯುವ ನೀರಿನ ಅನುದಾನಕ್ಕೆ ಮನವಿ

Lingaraj Badiger
Updated On : 19 Mar 2013, 10:39 am

ಕಡೂರು: ಕಡೂರು ಹಾಗೂ ಬೀರೂರು ಪಟ್ಟಣಗಳ ಜನರಿಗೆ ಕುಡಿಯುವ ನೀರಿಗೆ ಸಾಕಷ್ಟು ಅನುದಾನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡ ಕೆ.ಎಂ. ಕೆಂಪರಾಜು ಹೇಳಿದರು.  ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಪಕ್ಷಗಳ ಅಭ್ಯರ್ಥಿಗಳು ಸ್ವಂತ ಖರ್ಚಿನಲ್ಲಿ ಟ್ಯಾಂಕರ್‌ಗಳ ಮೂಲಕ ಸ್ವಲ್ಪಮಟ್ಟಿಗೆ ಕುಡಿಯುವ ನೀರು ಪೂರೈಕೆ ಮಾಡಿದ್ದಾರೆ. ಇದೀಗ ಈ ಜವಾಬ್ದಾರಿಯ ಸಂಪೂರ್ಣ ಹೊಣೆ ಪುರಸಭೆಯದಾಗಿದ್ದು, ನೂತನ ಸಮಿತಿ ಅಸ್ಥಿತ್ವಕ್ಕೆ ಬರುವವರೆಗೂ ಕಡೂರು ಹಾಗೂ ಬೀರೂರು ಪಟ್ಟಣಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಅನುದಾನ ನೀಡುವಂತೆ ಜಿಲ್ಲಾಧಿಕಾರಿಗಳ ಬಳಿಗೆ ಕಾಂಗ್ರೆಸ್ ಪುರಸಭೆಗೆ ಆಯ್ಕೆಯಾಗಿರುವ ನೂತನ ಸದಸ್ಯರ ನಿಯೋಗದೊಂದಿಗೆ ಭೇಟಿಮಾಡಿ ಈ ಬಗ್ಗೆ ಮನವರಿಕೆ ಮಾಡಲಾಯಿತು ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳು ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುವುದರಿಂದ ಕೂಡಲೇ ಕಡೂರು ಹಾಗೂ ಬೀರೂರು ಪುರಭೆಗಳಿಗೆ ಅನುದಾನ ಬಿಡುಗಡೆ ಮಾಡಿದಲ್ಲಿ ಎರಡೂ ಪಟ್ಟಣಗಳ ಜನರಿಗೆ ನೀರು ಸರಬರಾಜು ಮಾಡಲು ಅನುಕೂಲವಾಗಲಿದೆ ಎಂದು ಮನವಿ ಮಾಡಲಾಯಿತು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement