ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಕಾರು- ಬೈಕ್ ಡಿಕ್ಕಿ: ಗ್ರಾಪಂ ಸದಸ್ಯ ಸಾವು

Lingaraj Badiger
Updated On : 21 Mar 2013, 11:05 am

ಕ.ಪ್ರ.ವಾರ್ತೆ,ಮೂಡಿಗಿರೆ, ಮಾ.20
ತಾಲೂಕಿನ ಮುತ್ತಿಗೆಪುರದ ಬಳಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಆದ ಪರಿಣಾಮ ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಮೃತ ವ್ಯಕ್ತಿ ಹಳೇಮೂಡಿಗೆರೆ ಗ್ರಾಮ ಪಂಚಾಯಿತ್ ಸದಸ್ಯ ಮುತ್ತಿಗೆಪುರದ ವಾಸಿ ರಾಜೇಶ್ (35). ಕಾರ್ಯನಿಮಿತ್ತ ಮನೆಯಿಂದ ಹೊರಟ ರಾಜೇಶ್‌ಗೆ ಮುದ್ರೆಮನೆ ಕಾಫಿ ಕ್ಯೂರಿಂಗ್ ಸಮೀಪ ಅತಿ ವೇಗವಾಗಿ ಬಂದ ಕಾರು ಗುದ್ದಿದ ಪರಿಣಾಮ ರಾಜೇಶ್‌ಗೆ ತೀವ್ರಸ್ವರೂಪದ ಗಾಯಗಳಾಗಿ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.
ಸುದ್ದಿ ತಿಳಿದು ಹಳೇಮೂಡಿಗೆರೆ ಗ್ರಾಮ ಪಂಚಾಯಿತ್ ಅಧ್ಯಕ್ಷರು ಹಾಗೂ ಸದಸ್ಯರು ಗ್ರಾಮ ಪಂಚಾಯಿತ್‌ಗೆ ರಜೆ ಘೋಷಿಸಿ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡರು. ಮೂಡಿಗೆರೆ
ಪೊಲೀಸರು ಕಾರನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿ ತನಿಕೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement