ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಫಲಾನುಭವಿಗಳಿಗೆ ಚೆಕ್ ವಿತರಣೆ

Lingaraj Badiger
Updated On : 21 Mar 2013, 11:13 am

ಕ.ಪ್ರ ವಾರ್ತೆ,ಚಿಕ್ಕಮಗಳೂರು,ಮಾ. 20
ಕ್ಷೇತ್ರದಾದ್ಯಂತ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಅಡಿ ದೊರೆಯುವ ಸೌಲಭ್ಯಗಳನ್ನು ಪಕ್ಷಾತೀತವಾಗಿ ವಿತರಿಸಲಾಗಿದೆ ಎಂದು ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿದ್ದಾರೆ.
ಶಾಸಕರು ತಮ್ಮ ನಿವಾಸದಲ್ಲಿ ಬುಧವಾರದಂದು ಅಂಬಳೆ ಹೋಬಳಿಯ 20 ಜನ ಫಲಾನುಭವಿಗಳಿಗೆ ಸಂಧ್ಯಾ ಸುರಕ್ಷಾ ಮತ್ತು ರಾಷ್ಟ್ರೀಯ ಕುಟುಂಬ ಭದ್ರತಾ ಯೋಜನೆಯಡಿ 25 ಜನ ಫಲಾನುಭವಿಗಳಿಗೆ ಚೆಕ್ ವಿತರಿಸಿ ಮಾತನಾಡಿ, ಅಭಿವೃದ್ಧಿ ಕೆಲಸಗಳ ಜೊತೆಗೆ ಸಂಧ್ಯಾ ಸುರಕ್ಷಾ ಯೋಜನೆ, ವೃದ್ಧಾಪ್ಯ ವೇತನ, ಅಂಗವಿಕಲರ ವೇತನಗಳನ್ನು ಗ್ರಾಮೀಣ ಭಾಗದಲ್ಲಿ ಪಕ್ಷಾತೀತವಾಗಿ ವಿತರಿಸಲಾಗಿದೆ ಎಂದರು.
ನಾರಾಯಣ್, ರಮೇಶ್, ಚನ್ನಪ್ಪ, ರತೀಶ್ ಹಾಗೂ ಇತರೆ ಫಲಾನುಭವಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement