ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

420 ಲೋಡ್ ಮರಳು ವಶ

Lingaraj Badiger
Updated On : 22 Mar 2013, 11:17 am

ಕ.ಪ್ರ. ವಾರ್ತೆ,ಚಿಕ್ಕಮಗಳೂರು,ಮಾ.21
ತಾಲೂಕಿನ ಮರ್ಲೆ ಗ್ರಾಮದಲ್ಲಿ ದೊಡ್ಡ ಪ್ರಮಾಣದಲ್ಲಿ ದಾಸ್ತಾನು ಮಾಡಿದ್ದ ಮರಳನ್ನು ಲೋಕೋಪಯೋಗಿ ಇಲಾಖೆಯವರು ಗುರುವಾರ ವಶಕ್ಕೆ ತೆಗೆದುಕೊಂಡಿದ್ದಾರೆ.
ಇಲ್ಲಿ ಸುಮಾರು 420 ಲೋಡ್ ಮರಳು ಸಂಗ್ರಹ ಮಾಡಲಾಗಿದ್ದು, ಹೊಸ ಮರಳು ನೀತಿಯ ಪ್ರಕಾರ ಇದು ಅಕ್ರಮ ಎಂದು ಹೇಳಲಾಗುತ್ತಿದೆ.
ಮರ್ಲೆಯ ಜಲ್ಲಿ ಕ್ರಷರ್‌ನ ಆವರಣದೊಳಗೆ ಮರಳು ಸಂಗ್ರಹ ಮಾಡಲಾಗಿದ್ದು, ಗುರುವಾರ ರೈತರು ದಿಢೀರ್ ಪ್ರತಿಭಟನೆ ನಡೆಸಿ, ಅಕ್ರಮವಾಗಿ ಸಂಗ್ರಹ ಮಾಡಿರುವ ಮರಳನ್ನು ವಶಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ರಸ್ತೆ ತಡೆ ನಡೆಸಿದರು.
ಆಗ ಸ್ಥಳಕ್ಕೆ ತಹಸೀಲ್ದಾರ್ ವೀಣಾ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಕೋದಂಡರಾಮಯ್ಯ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮಾದೇಗೌಡ ಭೇಟಿ ನೀಡಿ ಪರಿಶೀಲಿಸಿದರು.
ಇಲಾಖೆ ವಶಕ್ಕೆ: ಇಲ್ಲಿ ಸುಮಾರು 420 ಲೋಡ್ ಮರಳು ಸಂಗ್ರಹ ಮಾಡಲಾಗಿದೆ. ಇದರಲ್ಲಿ ಫಿಲ್ಟರ್ ಮರಳು ಸಹ ಇರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ತಪಾಸಣೆ ನಡೆಸಿ ಈ ಮರಳನ್ನು ಲೋಕೋಪಯೋಗಿ ಇಲಾಖೆಯ ವಶಕ್ಕೆ ನೀಡಲಾಯಿತು.
ಸಂಬಂಧಪಟ್ಟವರು ದಾಖಲೆಗಳನ್ನು ನೀಡಿದರೆ ಮಾತ್ರ ಅದನ್ನು ಅವರ ವಶಕ್ಕೆ ನೀಡಲಾಗುವುದು. ಇಲ್ಲದೆ ಹೋದರೆ ಅಕ್ರಮ ಎಂದು ಪರಿಗಣಿಸಲಾಗುವುದು.
ಹೊಸ ಮರಳು ನೀತಿಯ ಪ್ರಕಾರ ಕಟ್ಟಡ ನಿರ್ಮಾಣ ಮಾಡುವವರು, ನಿರ್ಮಾಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ನೀಡಿದರೆ ಮಾತ್ರ ಅವರಿಗೆ ಲೋಕೋಪಯೋಗಿ ಇಲಾಖೆಯಿಂದ ಲೈಸನ್ಸ್ ನೀಡಲಾಗುವುದು. ಅಂದರೆ ಅಗತ್ಯಕ್ಕಿಂತ ಹೆಚ್ಚು ಮರಳು ಕೊಡುವಂತ್ತಿಲ್ಲ.
ಮೇಲ್ನೋಟಕ್ಕೆ ಅಕ್ರಮ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮರಳಿನ ಅಭಾವ ಇದ್ದು, ಇಂತಹ ಸಂದರ್ಭದಲ್ಲಿ ಒಂದೆ ಕಡೆಯಲ್ಲಿ ಇಷ್ಟು ಪ್ರಮಾಣದಲ್ಲಿ ಮರಳು ಸಂಗ್ರಹ ಮಾಡಿರುವುದು ಮೇಲ್ನೋಟಕ್ಕೆ ಅಕ್ರಮವೆಂದು ಕಂಡುಬರುತ್ತಿದೆ ಎಂದು ಹೆಸರು ಹೇಳಲು ಇಚ್ಚಿಸದ ಅಧಿಕಾರಿಗಳು ತಿಳಿಸಿದ್ದಾರೆ.
ಮರ್ಲೆಯಲ್ಲಿ ಪ್ರತಿಭಟನೆ ನಡೆಸಿದ ರೈತರು, ಇಲ್ಲಿ ನಡೆಯುತ್ತಿರುವ ಜಲ್ಲಿ ಕ್ರಷರ್ ಮತ್ತು ಕಲ್ಲು ಗಣಿಗಾರಿಕೆಯನ್ನು ರದ್ದುಪಡಿಸುವಂತೆ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಶಶಿಧರ್, ಮುಖಂಡರಾದ ಮಲ್ಲೇಶಪ್ಪ, ನಾಗಪ್ಪಶೆಟ್ಟಿ, ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments