ಅರ್ಜಿ ಆಹ್ವಾನ
ಚಿಕ್ಕಮಗಳೂರು: ತಾಲೂಕಿನ ವಿವಿಧ ಅಂಗನವಾಡಿಗಳಲ್ಲಿ ಖಾಲಿ ಇರುವ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗುಲ್ಲನ್ ಪೇಟೆ, ಯಲಗುಡಿಗೆ, ಗಂಡಿ, ಕಲ್ಲೇದೇವರಪುರ, ಕೆಸವಿನಮನೆ(ಕಸಬಾ- 2 ವೃತ್ತ), ಕೆಸವಿನ ಮನೆ (ಕೈಮರ ವೃತ್ತ), ನಂದಿಕೆರೆ, ಚಿಕ್ಕೊಳಲೆ ಹಾಗೂ ವಳಗೇರಹಳ್ಳಿಯಲ್ಲಿ ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಲು ಏ.16 ಕೊನೆಯ ದಿನ, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಯುವ ಸಮಾವೇಶ
ಚಿಕ್ಕಮಗಳೂರು: ನೆಹರು ಯುವ ಕೇಂದ್ರ ಹಾಗೂ ವಿವಿಧ ಸಂಘ, ಮಂಡಳಿಗಳ ಸಹಯೋಗದಲ್ಲಿ ಜಿಲ್ಲಾ ಯುವ ಸಮಾವೇಶ ಹಾಗೂ ಸಂಘ, ಮಂಡಳಿಗಳಿಗೆ ಕ್ರೀಡಾ ಪರಿಕರ ವಿತರಣೆ ಹಾಗೂ ಯುವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾ.25 ರಂದು ಬೆಳಗ್ಗೆ 11 ಗಂಟೆಗೆ ನಗರದ ಸ್ಕೌಟ್ಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ವಿ. ಯಶವಂತ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿ. ಶಿವಶಂಕರ್ ಅಧ್ಯಕ್ಷತೆ ವಹಿಸಲಿದ್ದಾರೆ.