ಮುಖಂಡರ ಸಂತಾಪ
ಜನಾರ್ದನಸ್ವಾಮಿ: ಹಿರಿಯ ಗಾಂಧಿವಾದಿ, ಸ್ವಾತಂತ್ರ್ಯ ಹೋರಾಟಗಾರ, ಸಾಹಿತಿ, ಚಿಂತಕ, ಸಮಾಜ ಸುಧಾರಕ, ಮಾನವತಾವಾದಿ ಬೆಳಗೆರೆ ಕೃಷ್ಣಶಾಸ್ತ್ರಿ ನಿಧನ ವಿಷಾದನೀಯ. ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಹಾಗೂ ಅವರ ಅಪಾರ ಅಭಿಮಾನಿ ಬಳಗಕ್ಕೆ ಮತ್ತು ಕುಟುಂಬ ಸದಸ್ಯರಿಗೆ ಈ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಸಂಸದ ಜನಾರ್ಧನಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಡಾ.ಸಿ. ಶಿವಲಿಂಗಪ್ಪ: ಶತಮಾನದುದ್ದಕ್ಕೂ ಸಾರಸ್ವತ ಲೋಕದ ಎಲ್ಲ ಸಹೃದಯರ ಒಡನಾಡಿಯಾಗಿದ್ದ ಬೆಳಗೆರೆ ಕೃಷ್ಣಶಾಸ್ತ್ರಿಗಳ ನಿಧನದಿಂದಾಗಿ ಬಹುದೊಡ್ಡ ಶೂನ್ಯ ಆವರಿಸಿದಂತಾಗಿದೆ ಎಂದು ಸಾಹಿತಿ ಡಾ.ಸಿ. ಶಿವಲಿಂಗಪ್ಪ ಹೇಳಿದರು.
ಪಟ್ಟಣದ ವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಸಂತಾಪ ಸಭೆಯಲ್ಲಿ ಮಾತನಾಡಿ, ಮಧ್ಯ ಕರ್ನಾಟಕ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯಲ್ಲಿ ಸಾಂಸ್ಕೃತಿಕ ಬಡತನವನ್ನು ನೀಗಿದ ಧಳುಕಿನ ವೆಂಕಣ್ಣಯ್ಯ, ತರಾಸು, ತ.ಸು. ಶಾಮರಾಯರಂತಹ ಮಹನೀಯರು ಸಾಲಿನಲ್ಲಿಯೇ ತನ್ನ ಅಕ್ಷರ ಕೃಷಿ ಮತ್ತು ವಿದ್ಯಾದಾನ, ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಕೃಷ್ಣಶಾಸ್ತ್ರಿಗಳು ಒಂದಿಡೀ ತಲೆಮಾರನ್ನೇ ಪ್ರಭಾವಿಸಿದ್ದರೆಂದು ಹೇಳಿದರು. ಕಾಲೇಜಿನ ಅಧ್ಯಾಪಕ ವರ್ಗ ಮತ್ತು ವಿದ್ಯಾರ್ಥಿಗಳು ಸಂತಾಪ ಸಭೆಯಲ್ಲಿ ಭಾಗವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.