ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಜನರ ಕಷ್ಟಕ್ಕೆ ಸ್ಪಂದಿಸಿದ್ದೇನೆ

Rashmi Kasaragodu
Updated On : 25 Mar 2013, 11:04 am

ಕ.ಪ್ರ.ವಾರ್ತೆ, ಚಿಕ್ಕಮಗಳೂರು , ಮಾ. 24
ಜನರಿಗೆ ಅಧಿಕಾರದ ದರ್ಪ ತೋರುವ ಮಂತ್ರಿ ಆಗದೇ, ಎಲ್ಲರ ವಿಶ್ವಾಸ ಪ್ರೀತಿ ಗಳಿಸಿ ಎಲ್ಲರ ಮನೆ ಮಗನಾಗಿ ಜನರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಾ ಶಾಸಕ ಸ್ಥಾನದ ಜವಾಬ್ಧಾರಿ ಹಾಗೂ ಮಂತ್ರಿ ಸ್ಥಾನದ ಹೊಣೆಗಾರಿಕೆ ನಿಭಾಯಿಸಿದ್ದೇನೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ ಹೇಳಿದ್ದಾರೆ.
      ನಗರದ ತಮಿಳು ಕಾಲೋನಿಯಲ್ಲಿ ಶನಿವಾರ ಸಂಜೆ ನಡೆದ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಮುಸ್ಲಿಮರು ಪಕ್ಷಕ್ಕೆ ಸೇರ್ಪಡೆಗೊಳಿಸಿ ಮಾತನಾಡಿದ ಅವರು, ಮತದಾರರು ಚುನಾವಣೆಯಲ್ಲಿ ಯೋಗ್ಯ ಅಭ್ಯರ್ಥಿ ಆಯ್ಕೆ ಮಾಡಬೇಕು. ಪಕ್ಷಕ್ಕೆ ಪ್ರಾಮಾಣಿಕವಾಗಿ ಕೆಲಸ ಮಾಡಿದವರನ್ನು ಪಕ್ಷವು ಗುರುತಿಸಿ ಉತ್ತಮ ಸ್ಥಾನಗಳನ್ನು ನೀಡಿದೆ.
  ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಕೆಲಸ ಮಾಡಿದ ಕಾರ್ಯಕರ್ತರಿಗೆ ನನ್ನ ಕೈಲಾದ ಅನುಕೂಲ ಮಾಡಿಕೊಟ್ಟಿದ್ದೇನೆ ಎಂದರು.
ಸ್ವಯಂ ಪ್ರೇರಿತರಾಗಿ ಸೇರ್ಪಡೆ: ಎತ್ನ ನಿಯತ್, ಉತ್ನ ಭರ್ಕತ್ ಎನ್ನುವ ರೀತಿಯಲ್ಲಿ ಖುರೇಷಿಯು ಸಾಮಾನ್ಯ ಕಾರ್ಯಕರ್ತನಾಗಿ ಬಿಜೆಪಿ ಸೇರಿ ಇಂದು ವಕ್ಫ್ ಬೋರ್ಡ್ ಅಧ್ಯಕ್ಷ ಮತ್ತು ನಗರಸಭಾ ಸದಸ್ಯನಾಗಿ ಆಯ್ಕೆಗೊಂಡಿದ್ದಾರೆ.
  ಮುಸ್ಲಿಮರು ಬಿಜೆಪಿಯ ಅಭಿವೃದ್ಧಿ ಕೆಲಸಗಳನ್ನು ಗುರುತಿಸಿ ಸ್ವಯಂ ಪ್ರೇರಿತರಾಗಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ ಎಂದು ಹೇಳಿದರು.
  ಮಂತ್ರಿಯಾಗಿ ಕೆಲವೇ ದಿನಗಳಲ್ಲಿ ನಗರಕ್ಕೆ ಮೆಡಿಕಲ್ ಮತ್ತು ಇಂಜಿನಿಯರಿಂಗ್ ಕಾಲೇಜು ತಂದಿದ್ದೇನೆ. ಸರ್ಕಾರದ ಯೋಜನೆಗಳನ್ನು ಪಕ್ಷಾತೀತವಾಗಿ ಅರ್ಹ ಫಲಾನುಭವಿಗಳಿಗೆ ನೀಡಲಾಗಿದೆ. ನಗರದಲ್ಲಿ ದಿನನಿತ್ಯ ಪಕ್ಷ ಬೇರು ಮಟ್ಟದಿಂದ ಬೆಳೆದು ಹೆಮ್ಮರವಾಗುತ್ತಿದೆ ಎಂದರು.
ಬಿಜೆಪಿ ಪಕ್ಷ ಬೆಂಬಲಿಸಿ: ವಿರೋಧ ಪಕ್ಷದವರು ಷಡ್ಯಂತರ ಮಾಡಿದರೂ ಸಹ ಜನ ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಹಣ, ಹೆಂಡದ ರಾಜಕಾರಣ ನಡೆಯುವುದಿಲ್ಲ. ಪ್ರಜ್ಞಾವಂತ ಮತದಾರರು ಮೇ 5 ರ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಬೆಂಬಲಿಸಿ ಮತ್ತಷ್ಟು ಅಭಿವೃದ್ಧಿ ಕೆಲಸ ಮಾಡಲು ಸಹಕರಿಸಬೇಕೆಂದು ಮನವಿ ಮಾಡಿದರು.
ಹಿಂದೂ- ಮುಸ್ಲಿಮರು ಸೋದರರು: ಬಿಜೆಪಿ ನಗರಾಧ್ಯಕ್ಷ ಕೋಟೆ ರಂಗನಾಥ್ ಮಾತನಾಡಿ, ನಗರದ ಎಲ್ಲಾ ವಾರ್ಡ್,ಗಳಲ್ಲೂ ಪಕ್ಷಾತೀತವಾಗಿ ಅಭಿವೃದ್ದಿ ಕೆಲಸ ಮಾಡಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಅಂಡೇ ಕ್ಷೇತ್ರ ವಾರ್ಡ್ ಬಿಜೆಪಿ ಕೈ ವಶವಾಗಿದೆ. ನಗರದಲ್ಲಿ ಹಿಂದೂ- ಮುಸ್ಲಿಮರು ಸೋದರರಾಗಿದ್ದಾರೆ. ವಿರೋಧ ಪಕ್ಷದವರಿಗೆ ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಸವಾಲು ಹಾಕುತ್ತೇವೆ ಎಂದರು.    ನಗರಸಭೆ ಸದಸ್ಯ ಮುತ್ತಯ್ಯ, ಮಾಜಿ ಅಧ್ಯಕ್ಷ ನಿಂಗೇಗೌಡ, ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ವೆಂಕಟೇಶ್, ಪಕ್ಷದ ಮುಖಂಡರುಗಳಾದ ಶಂಕರ್, ರಾಜಣ,, ಸುರೇಶ್, ಸೂರಿ, ಸೋಮು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement