ರೈತರ ಮುಷ್ಕರ ಮುಂದೂಡಿಕೆ
ಕ.ಪ್ರ ವಾರ್ತೆ, ತರೀಕೆರೆ, ಮಾ.24
ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ತರೀಕೆರೆ ತಾಲೂಕು ಶಾಖೆಯಿಂದ ಪಟ್ಟಣದ ಮಿನಿ ವಿಧಾನ ಸೌಧದ ಆವರಣದಲ್ಲಿ ತಾಲೂಕಿಗೆ ಸಮಗ್ರ ಹಾಗೂ ಶಾಶ್ವತ ನೀರಾವರಿಗೆ ಒತ್ತಾಯಿಸಿ ರೈತರು ನಡೆಸುತ್ತಿದ್ದ ಅನಿರ್ದಿಷ್ಟಾವದಿ ಮುಷ್ಕರವನ್ನು ಇದೀಗ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗಿರುವುದರಿಂದ ಮುಂದೂಡಲಾಗಿದೆ ಎಂದು ಶಾಖೆಯ ಪ್ರಧಾನ ಕಾರ್ಯದರ್ಶಿ ಸುರೇಶ್, ರೈತ ಮುಖಂಡರು ತಿಳಿಸಿದ್ದಾರೆ. 113 ದಿನ ನಡೆದ ಮುಷ್ಕರಕ್ಕೆ ಸಹಕರಿಸಿದ ಎಲ್ಲರಿಗೂ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.