ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಬಾಬಾಬುಡನ್ ಗುಹೆ, ಪಾದುಕೆ ದರ್ಶನಕ್ಕೆ ಅವಕಾಶ

Rashmi Kasaragodu
Updated On : 26 Mar 2013, 10:31 am

ಚಿಕ್ಕಮಗಳೂರು: ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಮಾ.27ರಿಂದ 29ರವರೆಗೆ ಉರುಸ್ ನಡೆಯಲಿದ್ದು  ಭಕ್ತಾಧಿಗಳಿಗೆ ಗುಹೆ ಮತ್ತು ಪಾದುಕೆ ದರ್ಶನಕ್ಕೆ ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ತಿಳಿಸಿದೆ.
2008ರ ಡಿ.1ರಂದು ಸುಪ್ರೀಂಕೋರ್ಟ್ ನೀಡಿರುವ ಆದೇಶದಂತೆ ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ  ದರ್ಗಾದಲ್ಲಿ ಧಾರ್ಮಿಕ ದತ್ತಿ ಆಯುಕ್ತರ 25-2-1989ರ ಆದೇಶದಲ್ಲಿ ಕ್ರೋಢೀಕರಿಸಿರುವ ಧಾರ್ಮಿಕ ವಿಧಾನಗಳನ್ನು ನಡೆಸಲು ಮಾತ್ರ ಅವಕಾಶವಿದೆ.
ಭಕ್ತಾಧಿಗಳಿಗೆ ಕುಡಿಯುವ ನೀರು, ಶೆಡ್, ಪ್ರಸಾದ ವ್ಯವಸ್ಥೆ, ಶೌಚಾಲಯ, ವೈದ್ಯಕೀಯ ಸೇವೆ ಮತ್ತು ವಿಶೇಷ  ಬಸ್ ಸೌಲಭ್ಯ ಮತ್ತಿತರ ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ.
ರಸ್ತೆ ಕಾಮಗಾರಿ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಭಕ್ತರನ್ನು ಕೊಂಡೊಯ್ಯುವ ವಾಹನ ಚಾಲಕರು ಅತಿ  ಎಚ್ಚರಿಕೆಯಿಂದ ವಾಹನಗಳನ್ನು ಚಾಲನೆ ಮಾಡಬೇಕು. ಮಾ.29ರಂದು ನಡೆಯುವ ಉರುಸ್ ಕಾರ್ಯಕ್ರಮಕ್ಕೆ  ಭಕ್ತಾಧಿಗಳು ಕ್ಯಾಮರಾ, ವೀಡಿಯೋ, ಮೊಬೈಲ್‌ಗಳನ್ನು ತರುವುದು ಮತ್ತು ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ.
ಕಾನೂನು ಸುವ್ಯವಸ್ಥೆ, ಶಾಂತಿಪಾಲನೆ ದೃಷ್ಟಿಯಿಂದ, ಧಾರ್ಮಿಕ ಕಾರ್ಯಕ್ರಮ ಸುಗಮವಾಗಿ ಜರುಗಲು ಭಕ್ತಾದಿಗಳು ಸಹಕರಿಸಬೇಕು ಎಂದು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement