ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಆರೋಗ್ಯ ಸಹಾಯಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಪ್ರತಿಭಟನೆ

Rashmi Kasaragodu
Updated On : 28 Mar 2013, 10:55 am

ಕ.ಪ್ರ. ವಾರ್ತೆ ಟಿ ಚಿಕ್ಕಮಗಳೂರು ಟಿ ಮಾ.27
ಬಾಳೆಹೊಳೆಯ ವ್ಯಾಪ್ತಿಯ ತಲಗೋಡು ಉಪ ಕೇಂದ್ರದಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ ಹಾಗೂ ಹಲ್ಲೆ ನಡೆಸಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಹಿರಿಯ, ಕಿರಿಯ ಆರೋಗ್ಯ ಸಹಾಯಕರ ಸಂಘದವರು ಬುಧವಾರ ಪ್ರತಿಭಟನೆ ನಡೆಸಿದರು.
ಸಂಘದ ಜಿಲ್ಲಾಧ್ಯಕ್ಷ ಎಚ್.ಎಸ್. ಉಮೇಶ್ ಅವರ ನೇತೃತ್ವದಲ್ಲಿ ಇಲ್ಲಿನ ಹಳೇ ತಾಲೂಕು ಕಚೇರಿಯಿಂದ ಮೆರವಣಿಗೆ ಹೊರಟು ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
ಕಠಿಣ ಶಿಕ್ಷೆ ವಿಧಿಸಲು ಮನವಿ: ತಲಗೋಡು ಉಪ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಿರಿಯ ಆರೋಗ್ಯ ಸಹಾಯಕಿ ಮೇಲೆ ತನೂಡಿ ಗ್ರಾಮದ ಚಿದಂಬರ ಎಂಬುವವನು ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ಸಂದರ್ಭದಲ್ಲಿ ದೈಹಿಕ ಹಾಗೂ ಮಾನಸಿಕವಾಗಿ ಹಲ್ಲೆ ನಡೆಸಿದ್ದಾರೆ.
ಈ ಸಂಬಂಧ ಬಂಧಿತರಾಗಿದ್ದ ಚಿದಂಬರ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಇದರಿಂದಾಗಿ ಆರೋಗ್ಯ ಸಹಾಯಕಿ ಭಯಭೀತರಾಗಿದ್ದಾರೆ.
ಆರೋಪಿಯು ದ್ವೇಷ ಮನೋಭಾವನೆಯಿಂದ ಹಲ್ಲೆ ಮತ್ತು ಅತ್ಯಾಚಾರಕ್ಕೆ ಯತ್ನಿಸುವ ಸಂಭವವಿದ್ದು ಜೀವಕ್ಕೆ ಆಪತ್ತು ತರುವ ಸಾಧ್ಯತೆ ಇದೆ. ಅದುದರಿಂದ ಅವರಿಗೆ ಕಠಿಣ ಶಿಕ್ಷೆ ನೀಡಲು ಶಿಫಾರಸ್ಸು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement