ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ವೈಭವದ ಸುಬ್ರಹ್ಮಣ್ಯಸ್ವಾಮಿ ಜಾತ್ರೆ

Rashmi Kasaragodu
Updated On : 28 Mar 2013, 10:55 am

ಕ.ಪ್ರ.ವಾರ್ತೆ ಟಿ ಚಿಕ್ಕಮಗಳೂರು ಟಿ  ಮಾ.27
ತಮಿಳು ಜನಾಂಗದ ಆರಾಧ್ಯ ದೈವ ಶ್ರೀ ಸುಬ್ರಹ್ಮಣ್ಯಸ್ವಾಮಿಯ ವಾರ್ಷಿಕ ಪಂಗುನಿ ಉತ್ತಿರ ಜಾತ್ರೆ ತಾಲೂಕಿನ ಕುಮಾರಗಿರಿಯಲ್ಲಿ ಬುಧವಾರ ಸಹಸ್ರಾರು ಭಕ್ತರ ನಡುವೆ ವೈಭವದಿಂದ ನಡೆಯಿತು.
ಜಾತ್ರೆಯ ಅಂಗವಾಗಿ ಕ್ಷೇತ್ರದ ಅಧಿದೇವತೆ ಶ್ರೀ ಸುಬ್ರಹ್ಮಣ್ಯಸ್ವಾಮಿಗೆ ಅಭಿಷೇಕ, ವಿಶೇಷ ಅಲಂಕಾರ, ಪೂಜೆ ಜರುಗಿತು. ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಕಾವಡಿಯನ್ನು ಹೊತ್ತು ಕಾಲ್ನಡಿಗೆ ಮೂಲಕ ಆಗಮಿಸಿದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ತಮಿಳು ಜನಾಂಗದ ನೂರಾರು ಭಕ್ತರು ಹರೋ ಹರಾ ಘೋಷಣೆಯೊಂದಿಗೆ ಕಾವಡಿ ಹರಕೆಯನ್ನು ಸಮರ್ಪಿಸಿದರು.
ಸಾಮೂಹಿಕ ವಿವಾಹ: ಇದೇ ವೇಳೆ ಜಾತ್ರೆಯ ಅಂಗವಾಗಿ ದೇವಾಲಯ ಸಮಿತಿ ವತಿಯಿಂದ ಸರಳ ಸಾಮೂಹಿಕ ವಿವಾಹ ನಡೆಯಿತು. ಮಂಗಳವಾದ್ಯ, ವೇದಘೋಷ ಮತ್ತು ಭಕ್ತರ ಶುಭ ಹಾರೈಕೆಯ ನಡುವೆ 13 ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್. ಮೂರ್ತಿ ಮಾತನಾಡಿದರು.
ಜಾತ್ರೆ ಮತ್ತು ಸಾಮೂಹಿಕ ವಿವಾಹಕ್ಕೆ ದಾನ ನೀಡಿದವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಅಧ್ಯಕ್ಷ ಬಿ. ವರದರಾಜು, ದೇವಾಲಯ ಸಮಿತಿಯ ಅಧ್ಯಕ್ಷ ಎ. ಚಿನ್ನಸ್ವಾಮಿ, ಉಪಾಧ್ಯಕ್ಷ ಜಿ. ರಮೇಶ್, ಜಿ. ಶಂಕರ್, ಖಜಾಂಚಿ ಎನ್. ಶಕ್ತಿವೇಲ್, ಗ್ರಾಮದ ಹಿರಿಯ ಚಂದ್ರೇಗೌಡ, ಜಿಪಂ ಮಾಜಿ ಅಧ್ಯಕ್ಷ ಕೆ. ಮಹಮ್ಮದ್, ತಾಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಎಂ. ಹಸ್ಯ್ಭಾವ, ಬಿಜೆಪಿ ನಗರಾಧ್ಯಕ್ಷ ಕೋಟೆ ರಂಗನಾಥ್, ಮೋದಾಲ ವೆಂಕಟರಾಂ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement