ಯುಗಮಾನೋತ್ಸವಕ್ಕೆ ತೆರೆ
ನರಸಿಂಹರಾಜಪುರ: ಬಾಳೆಹೊನ್ನೂರು ರಂಭಾಪುರಿ ವೀರಸಿಂಹಾಸನ ಮಹಾ ಸಂಸ್ಥಾನ ಪೀಠದಲ್ಲಿ ಕಳೆದ 7 ದಿನಗಳಿಂದ ನಡೆಯುತ್ತಿದ್ದ ಶ್ರೀ ಜಗದ್ಗುರು ರೇಣಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾ ರಥೋತ್ಸವದ ಅಂಗವಾಗಿ ಶ್ರೀ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ವೀರ ಸೋಮೇಶ್ವರ ಶಿವಾಚಾರ್ಯ ಭಗವಾತ್ಪದರ ಸಾನ್ನಿದ್ಯದಲ್ಲಿ ಜರುಗಿದ ಎಲ್ಲಾ ಧಾರ್ಮಿಕ ಮತ್ತು ಸಭಾ ಕಾರ್ಯಕ್ರಮಗಳು ಶುಕ್ರವಾರ ಸುರಗೀ ಸಮಾರಾಧನೆಯೊಂದಿಗೆ ಸಂಪನ್ನಗೊಂಡಿತು.
ಶುಕ್ರವಾರ ಭದ್ರಾ ತಡದಲ್ಲಿ ಶ್ರೀಗಳು ರುದ್ರಾಭಿಷೇಕ ನಡೆಸಿ ಭಕ್ತರಿಗೆ ಕರುಣ ಪ್ರಸಾದ ವಿತರಿಸಿದರು.
30 ಸಾವಿರ ಭಕ್ತರು: ಈ ವರ್ಷದ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾ ರಥೋತ್ಸವಕ್ಕೆ ಒಟ್ಟು 30 ಸಾವಿರ ಭಕ್ತರು ಪಾಲ್ಗೊಂಡಿದ್ದರು. ನಾಡಿನ 150 ಕ್ಕೂ ಹೆಚ್ಚು ಶಿವಾಚಾರ್ಯರು ಪಾಲ್ಗೊಂಡಿದ್ದರು ಎಂದು ಬಾಳೆಹೊನ್ನೂರು ರಂಭಾಪುರಿ ಮಹಾ ಸಂಸ್ಥಾನ ಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್. ಬಾಳನಗೌಡ್ರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.