ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಆಯುರ್ವೇದ ಚಿಕಿತ್ಸೆ ಪುರಾತನವಾದುದು

Rashmi Kasaragodu
Updated On : 31 Mar 2013, 12:25 pm

ಕ.ಪ್ರ ವಾರ್ತೆ, ಶೃಂಗೇರಿ, ಮಾ.30
ಆಯುರ್ವೇದ ಚಿಕಿತ್ಸಾ ಪದ್ಧತಿ ಪುರಾತನವಾದುದು. ಇಂತಹ ದೇಶಿಯ ಚಿಕಿತ್ಸಾ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ಡಾ. ಅಣ್ಣಾದೊರೈ ಅಭಿಪ್ರಾಯಪಟ್ಟರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಕಿಗ್ಗಾ ಆಯುಷ್ ಇಲಾಖೆ, ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾ ಆಯುಷ್ ಚಿಕಿತ್ಸಾಲಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಉಚಿತ ಆಯುಷ್ ತಪಾಸಣಾ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಯುರ್ವೇದ ಉಳಿಸಿ: ಇಂದಿನ ಜಂಜಾಟದ ಜೀವನದಲ್ಲಿ ಹೆಚ್ಚುತ್ತಿರುವ ಕಾಯಿಲೆಗಳನ್ನು ತಡೆಗಟ್ಟುವಲ್ಲಿ ಮತ್ತು ಗುಣಪಡಿಸುವಲ್ಲಿ ಆಯುರ್ವೇದ ವೈದ್ಯಪದ್ಧತಿ ಪ್ರಮುಖ ಪಾತ್ರ ವಹಿಸುತ್ತಿದೆ. ಪ್ರತಿಯೊಬ್ಬ ವ್ಯಕ್ತಿಗೂ ಕೈಗಟುಕುವ ಬೆಲೆಯಲ್ಲಿ ಚಿಕಿತ್ಸೆ ದೊರೆಯುವಂತಾಗಬೇಕು. ಆಯುರ್ವೇದ ವೈದ್ಯಪದ್ಧತಿಯ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಕೆಲಸ ನಡೆಯಬೇಕಿದೆ. ಆಯುರ್ವೇದ ವೈದ್ಯ ಪದ್ಧತಿಯನ್ನು ಉಳಿಸಿ ಬೆಳೆಸಬೇಕಿದೆ. ಇದು ಪೀಳಿಗೆಯಿಂದ ಪೀಳಿಗೆಗೆ ಮುಂದುವರೆಯಬೇಕಿದೆ ಎಂದರು.
ತಾಲೂಕು ವೈದ್ಯಾಧಿಕಾರಿ ಡಾ. ವೆಂಕಟೇಶ್ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಆಯುರ್ವೇದ ವೈದ್ಯ ಪದ್ಧತಿಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಇಂತಹ ಶಿಬಿರಗಳು ಗ್ರಾಮೀಣ ಪ್ರದೇಶಗಳಲ್ಲಿಯೂ ನಡೆಯಬೇಕಿದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಡಾ. ಸುಜಾತ ಶೆಟ್ಟಿ, ಡಾ. ದಿನಕರ ಡೋಂಗ್ರೆ, ಡಾ. ರಮ್ಯ, ಡಾ. ಉದಯ್ಶಂಕರ್, ಡಾ. ಅಂಬಿಕಾ, ಡಾ. ಕೇಶವ್, ಇನ್ನರ್ ವ್ಹೀಲ್ ಸುಗಂದಿನಿ ಕಾಡಪ್ಪಗೌಡ, ಕಾಡಪ್ಪಗೌಡ, ಡಾ. ವಿಕ್ರಂ ಮತ್ತಿತರರು ಉಪಸ್ಥಿತರಿದ್ದರು. ಸುಧಾಕರ ಅಗಳಗಂಡಿ ಸ್ವಾಗತಿಸಿದರು. ಬಾಸ್ಕರ್ ನಿರೂಪಿಸಿದರು. ದಿನಕರ ಡೋಂಗ್ರೆ ಪ್ರಾಸ್ತಾವಿಕ ಮಾತನಾಡಿದರು. ಋಷ್ಯಶೃಂಗ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement