ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಕಾಂಗ್ರೆಸ್ಗೆ ಅಧಿಕಾರ ನಿಶ್ಚಿತ

Rashmi Kasaragodu
Updated On : 31 Mar 2013, 12:28 pm

ಕ.ಪ್ರ ವಾರ್ತೆ, ಸಖರಾಯಪಟ್ಟಣ, ಮಾ. 30
ಪಕ್ಷದ ಮುಖಂಡರು, ಕಾರ್ಯಕರ್ತರು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಈ ಚುನಾವಣೆಯಲ್ಲಿ ದುಡಿದರೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂದು ಕಾಂಗ್ರೆಸ್ ಮುಖಂಡ ಶಾಂತೇಗೌಡ ಹೇಳಿದ್ದಾರೆ.
ಇಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಹೋಬಳಿ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಭ್ರಷ್ಟಚಾರ ಮತ್ತು ಒಳಜಗಳ ಹಾಗೂ ಜೆಡಿಎಸ್ನ ಆಂತರಿಕ ಕಚ್ಚಾಟದಿಂದ ಬೇಸತ್ತ ಮತದಾರರು ಕಾಂಗ್ರೆಸ್ ಕಡೆ ಒಲವು ತೋರುತ್ತಿದ್ದಾರೆ. ನಾವೆಲ್ಲರೂ ಒಟ್ಟಾಗಿ ದುಡಿದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.
ಜಿಪಂ ಮಾಜಿ ಅಧ್ಯಕ್ಷ ಎನ್.ಎಸ್. ಚಂದ್ರಪ್ಪ, ಪಿಎಲ್ಡಿ ಬ್ಯಾಂಕಿನ ಮಾಜಿ ಅಧ್ಯಕ್ಷ ಕಲ್ಮರಡಪ್ಪ ಮಾತನಾಡಿದರು. ಕಾಂಗ್ರೆಸ್ ಮುಖಂಡ ಧನಂಜಯಮೂರ್ತಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಬಿಎಸ್ಆರ್ ಕಾಂಗ್ರೆಸ್ ಪಕ್ಷ ಹಾಗೂ ಜೆಡಿಎಸ್ ಪಕ್ಷವನ್ನು ತೊರೆದು ಕೆಲವು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಸಭೆಯಲ್ಲಿ ಆರ್. ಚಂದ್ರಶೇಖರಪ್ಪ, ಎಸ್.ಎಸ್. ಶ್ರೀನಿವಾಸಗೌಡ, ಹಳದಳ್ಳಿ ಮೂರ್ತಿ, ಎನ್.ಡಿ. ಚಂದ್ರಪ್ಪ, ಕೆಂಗೇಗೌಡ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement